
ಅಜೆಕಾರು: ಅಜೆಕಾರ್ ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್ (ರಿ) ತನ್ನ ಶೈಕ್ಷಣಿಕ ಸೇವೆಯನ್ನು ಮತ್ತಷ್ಟು ವಿಸ್ತರಿಸಿದ್ದು, ಪದ್ಮನಗರದಲ್ಲಿ ನೂತನ ‘ಅಜೆಕಾರ್ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ’ಯನ್ನು ಆರಂಭಿಸುತ್ತಿದೆ. ಈ ಐದನೇ ಅಂಗಸಂಸ್ಥೆಯು 2026-27ನೇ ಶೈಕ್ಷಣಿಕ ಸಾಲಿನಿಂದ ಕಾರ್ಯನಿರ್ವಹಿಸಲು ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಕೃತ ಅನುಮೋದನೆ ಪಡೆದುಕೊಂಡಿದೆ.
ಸಮಾಜಸೇವಾ ದೃಷ್ಟಿಕೋನ ಹೊಂದಿರುವ ಈ ಟ್ರಸ್ಟ್, ಅಜೆಕಾರಿನ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ವಿಶೇಷ ಕೊಡುಗೆ ಘೋಷಿಸಿದೆ. ಈ ಭಾಗದ ಮಕ್ಕಳಿಗೆ 9ನೇ ತರಗತಿಯಿಂದ ಸಂಪೂರ್ಣ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ. ಕಳೆದ 15 ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣ ಮತ್ತು ವಿದ್ಯಾರ್ಥಿವೇತನ ನೀಡುತ್ತಾ ಬಂದಿರುವ ಸಂಸ್ಥೆಯು, ಈಗ ತನ್ನ 4ನೇ ಕ್ಯಾಂಪಸ್ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಮುಂದಾಗಿದೆ. ಪ್ರಸ್ತುತ 8ನೇ ತರಗತಿ ಪೂರೈಸಿ 9ನೇ ತರಗತಿಗೆ ಸೇರಬಯಸುವ ಆಸಕ್ತ ವಿದ್ಯಾರ್ಥಿಗಳು ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಪೋಷಕರನ್ನು ಕರೆತಂದು ಶಾಲಾ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು. ದಾಖಲಾತಿ ಪ್ರಕ್ರಿಯೆಗಾಗಿ 30.04.2026ರ ಒಳಗೆ ಕಚೇರಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 7992920707 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.



































