ಅಜೆಕಾರು ಮಹಾವಿಷ್ಣುಮೂರ್ತಿ ದೇವಸ್ಥಾನದ ಧ್ವಜಸ್ತಂಭ ನವೀಕರಣ: ಭಕ್ತರಿಗೆ ಸೇವಾ ಅವಕಾಶ

Date:

spot_img

ಕಾರ್ಕಳ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 2014 ರಲ್ಲಿ ನಿರ್ಮಿಸಲಾಗಿದ್ದ ಈ ಧ್ವಜಸ್ತಂಭವು ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ಸಮಸ್ಯೆಗೆ ಒಳಗಾಗಿದ್ದು, ಸ್ತಂಭದ ಮೇಲ್ಭಾಗದಲ್ಲಿ ಸಣ್ಣ ಬಿರುಕು ಕಾಣಿಸಿಕೊಂಡಿದೆ. ಮಳೆಗಾಲದ ಸಂದರ್ಭದಲ್ಲಿ ನೀರು ತಾಮ್ರದ ಕವಚದೊಳಗೆ ಜಿನುಗಿದ್ದರಿಂದ, ಒಳಗಿದ್ದ ಎಳ್ಳು ಮತ್ತು ಸಾಸಿವೆ ಮಿಶ್ರಣವು ಕೊಳೆತು ನೀರು ಹೊರಗೆ ಬರುತಿದ್ದು. ಈ ಹಿನ್ನೆಲೆಯಲ್ಲಿ ಭಕ್ತರ ಸಹಕಾರದೊಂದಿಗೆ ಧ್ವಜಸ್ತಂಭವನ್ನು ನವೀಕರಿಸಲು ಆಡಳಿತ ಮಂಡಳಿ ನಿರ್ಧರಿಸಿದೆ.

ಈ ಪವಿತ್ರ ಕಾರ್ಯಕ್ಕಾಗಿ ಸರಿಸುಮಾರು 4 ಕ್ವಿಂಟಾಲ್ ಉತ್ತಮ ಗುಣಮಟ್ಟದ ಕಪ್ಪು ಎಳ್ಳು ಹಾಗೂ 1 ಕ್ವಿಂಟಾಲ್ ಸಾಸಿವೆಯ ಅವಶ್ಯಕತೆಯಿದೆ. ಈ ಪುಣ್ಯ ಕಾರ್ಯದಲ್ಲಿ ಭಾಗಿಯಾಗಲು ಇಚ್ಛಿಸುವ ಭಕ್ತರು 5 ಕೆಜಿ ಅಥವಾ 10 ಕೆಜಿ ಪ್ರಮಾಣದಲ್ಲಿ ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಎಳ್ಳು ಮತ್ತು ಸಾಸಿವೆಯನ್ನು ದೇಣಿಗೆಯಾಗಿ ನೀಡಬಹುದಾಗಿದೆ. ವಸ್ತು ರೂಪದಲ್ಲಿ ನೀಡಲು ಸಾಧ್ಯವಾಗದವರು ಈ ಕಾರ್ಯಕ್ಕೆ ಧನಸಹಾಯವನ್ನೂ ಮಾಡಬಹುದು. ಆಸಕ್ತರು ಇಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ಒಳಗೆ ದೇವಸ್ಥಾನದ ಕಚೇರಿಗೆ ಭೇಟಿ ನೀಡಿ ಅಧಿಕೃತ ರಸೀದಿಯನ್ನು ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.