
ಕಾರ್ಕಳ: ಅಖಂಡ ಹಿಂದೂಸ್ಥಾನ್ ಎಂಬ ಫೇಸ್‌ಬುಕ್ ಪುಟದ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಮತ್ತು ಕೋಮು ಹಿಂಸೆಗೆ ಪ್ರಚೋದನೆ ನೀಡುವಂತಿರುವ ಪೋಸ್ಟ್ ಅನ್ನು ಹಂಚಿಕೊಂಡಿರುವ ಆರೋಪದ ಮೇಲೆ “ಹಿಂದೂ ಮುಖಂಡ ರತ್ನಾಕರ ಅಮೀನ್” ಎಂಬ ಫೇಸ್‌ಬುಕ್ ಖಾತೆದಾರರ ವಿರುದ್ಧ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮಂಗಳೂರು ಪ್ರದೇಶದಲ್ಲಿ ಸಂಭವಿಸಿದ ಎರಡು ಗಂಭೀರ ಕೋಮು ಹತ್ಯೆ ಪ್ರಕರಣಗಳ ಹಿನ್ನೆಲೆ ತಿಳಿದಿದ್ದರೂ, ರತ್ನಾಕರ ಅಮೀನ್ ಎಂಬವರು ತಮ್ಮ ಖಾತೆಯ ಮೂಲಕ ಸಮಾಜದಲ್ಲಿ ಜಾತಿ ಹಾಗೂ ಧರ್ಮಗಳ ನಡುವೆ ದ್ವೇಷ, ಭಿನ್ನತೆ, ಗಲಭೆ ಸೃಷ್ಟಿಸುವ ರೀತಿಯ ಅವಹೇಳನಕಾರಿ ವಿಷಯಗಳನ್ನು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.
ಈ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳು ಸಾರ್ವಜನಿಕ ಸಾಮರಸ್ಯಕ್ಕೆ ಬೆದರಿಕೆ ಉಂಟುಮಾಡುವ ಶಕ್ತಿಯುಳ್ಳವುವಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ .



































