spot_img

ಜೂಜು ಪ್ರಕರಣ ಮುಚ್ಚಲು ಲಂಚ ಬೇಡಿಕೆಯ ಆರೋಪ: ವಿಟ್ಲ ಪಿಎಸ್‌ಐ ಕೌಶಿಕ್ ಅಮಾನತು

Date:

spot_img

ವಿಟ್ಲ : ವಿಟ್ಲ ಪೊಲೀಸ್ ಠಾಣೆಯ ಪಿಎಸ್‌ಐ ವಿರುದ್ಧ ಜೂಜಾಟ ಪ್ರಕರಣವೊಂದನ್ನು ಮುಚ್ಚಿಹಾಕಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ವೈರಲ್‌ ಆದ ನಂತರ, ಪೊಲೀಸರು ತಕ್ಷಣ ಕಠಿಣ ಕ್ರಮ ಕೈಗೊಂಡಿದ್ದು, ಪಿಎಸ್‌ಐ ಕೌಶಿಕ್ ಬಿ.ಸಿ. ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

ಪ್ರಕರಣದ ಹಿನ್ನಲೆ:
ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಜೂಜಾಟದ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ, ಪಿಎಸ್‌ಐ ಕೌಶಿಕ್ ದಾಳಿ ನಡೆಸಿದ್ದರು. ಜೂಜಾಟದಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದರೂ, ಒಂದು ಮೋಟಾರ್ ಬೈಕ್ ಸ್ಥಳದಲ್ಲಿಯೇ ಇತ್ತು.

ಗಂಭೀರ ಆರೋಪ:
ಅಲ್ಲಿದ್ದ ಬೈಕ್ ಮಾಲೀಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದರ ಬದಲು, ಕೌಶಿಕ್ ಅವರು ವ್ಯಕ್ತಿಯನ್ನು ಠಾಣೆಗೆ ಕರೆಸಿ, ಮೂರನೇ ವ್ಯಕ್ತಿಯ ಮುಖಾಂತರ ಪ್ರಕರಣವನ್ನು ‘ಸೆಟ್ಲ್’ ಮಾಡಲು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧವಿರುವ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಇದನ್ನು ಯಾರೋ ರಹಸ್ಯವಾಗಿ ದಾಖಲಿಸಿದ್ದಾರೆ ಎನ್ನಲಾಗಿದೆ.

ಆಡಿಯೋ ವೈರಲ್ ಆಗುತ್ತಿದ್ದಂತೆ ಕ್ರಮ:
ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಉಂಟುಮಾಡಿತು. ಇದು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ ಕೂಡಲೆ, ತಕ್ಷಣ ತನಿಖೆಗೆ ಆದೇಶ ನೀಡಲಾಗಿದ್ದು, ಮೇ 12ರಂದು ಕೌಶಿಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಇಲಾಖಾ ವಿಚಾರಣೆ ಮುಂದುವರೆಸಲು ನಿರ್ಧರಿಸಲಾಗಿದೆ.

ಈ ಘಟನೆಯಿಂದಾಗಿ ಪೊಲೀಸ್ ಇಲಾಖೆಗೆ ಭಾರೀ ಮುಜುಗರ ಎದುರಾಗಿದ್ದು, ಉನ್ನತ ಮಟ್ಟದ ಪಾರದರ್ಶಕ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದಲ್ಲಿ ತಲೆಹೇನುಗಳ ಸಮಸ್ಯೆ ಹೆಚ್ಚಾಗಲು ಮಳೆಯೇ ಕಾರಣವೇ?

ಅದರಲ್ಲೂ ಮಳೆಯಲ್ಲಿ ನೆನೆಯುವುದರಿಂದ ತಲೆಯಲ್ಲಿ ಹೇನುಗಳಾಗುತ್ತವೆ ಎಂಬ ನಂಬಿಕೆ ಸಮಾಜದಲ್ಲಿ ವ್ಯಾಪಕವಾಗಿ ಹರಡಿದೆ.

ಹಾಲು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು: ಸತತ 3ನೇ ಬಾರಿ ತಾಲೂಕು ಉತ್ತಮ ಸಂಘ ಪ್ರಶಸ್ತಿ ಪಡೆದ ಗುಡ್ಡೆಯಂಗಡಿ

ದಕ್ಷಿಣ ಕನ್ನಡ ಜಿಲ್ಲೆಯ ಕುಲಶೇಖರ, ಮಂಗಳೂರು ಇದರ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು 2024-25ನೇ ಸಾಲಿನ ಉತ್ತಮ ಗುಣಮಟ್ಟದ ಹಾಲು ಉತ್ಪಾದಕರ ಸಂಘ ಪ್ರಶಸ್ತಿಯನ್ನು ಗುಡ್ಡೆಯಂಗಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೀಡಿ ಗೌರವಿಸಿದೆ

ರಜನಿಕಾಂತ್‌ರ “ಕೂಲಿ” ಚಿತ್ರದ ಟ್ರೈಲರ್ ಅಬ್ಬರ: ಕನ್ನಡಿಗ ಉಪೇಂದ್ರ ಪಾತ್ರದ ಬಗ್ಗೆ ಹೆಚ್ಚಿದ ಕುತೂಹಲ

ಸೂಪರ್‌ಸ್ಟಾರ್ ರಜನಿಕಾಂತ್ ಅವರ 171ನೇ ಸಿನಿಮಾ "ಕೂಲಿ" ಟ್ರೈಲರ್ ಬಿಡುಗಡೆಯಾಗಿ ದೇಶಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ

ನೂತನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ: ಕುಲ್ಗಾಮ್‌ನಲ್ಲಿ 3 ಉಗ್ರರ ಹತ್ಯೆ

ಕಣಿವೆ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸ್ಥಾಪಿಸಲು ಭಾರತೀಯ ಸೇನೆಯು ಮತ್ತೊಂದು ಮಹತ್ವದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.