
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ 27ನೇ ವರ್ಷದ ಭಜನಾ ಕಮ್ಮಟದಲ್ಲಿ ಉಡುಪಿ ತಾಲೂಕಿನ ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂಡಳಿಯು ತಾಲೂಕಿನ ‘ಶ್ರೇಷ್ಠ ಭಜನಾ ಮಂಡಳಿ ಪುರಸ್ಕಾರ’ಕ್ಕೆ ಆಯ್ಕೆಯಾಗಿದೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಶ್ರೀ ಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ಪ್ರತೀ ತಾಲೂಕಿನ ಒಂದು ಶ್ರೇಷ್ಠ ಭಜನಾ ಮಂಡಳಿಗೆ ನೀಡಲ್ಪಡುವ ‘ಸಾಧಕ ಪ್ರಶಸ್ತಿ’ಯನ್ನು ಭಜನಾ ಕಮ್ಮಟದ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ! ಡಿ.ವೀರೇಂದ್ರ ಹೆಗ್ಗಡೆ ಅವರು ಹೇಮಾವತಿ ವಿ. ಹೆಗ್ಗಡೆ ಅವರೊಂದಿಗೆ ಶ್ರೀ ಕ್ಷೇತ್ರ ಮಾಣಿಲದ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಉಡುಪಿ ತಾಲೂಕಿನ ಶ್ರೀ ವಿಠೋಬ ಭಜನಾ ಮಂಡಳಿ ಅಂಬಲಪಾಡಿ ಇದರ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶ್ರೀ ವಿಠೋಬ ಭಜನಾ ಮಂಡಳಿ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಅಧ್ಯಕ್ಷ ಶಿವದಾಸ್ ಪಿ, ನಿಕಟಪೂರ್ವ ಅಧ್ಯಕ್ಷ ಹಾಗೂ ಭಜನಾ ಸಂಚಾಲಕ ಶಿವಕುಮಾರ್ ಅಂಬಲಪಾಡಿ, ಉಪಾಧ್ಯಕ್ಷ ಎ.ಮುದ್ದಣ್ಣ ಪೂಜಾರಿ, ಮಾಜಿ ಅಧ್ಯಕ್ಷ ಸುಧಾಕರ ಎ , ಪ್ರಧಾನ ಕಾರ್ಯದರ್ಶಿ ರಾಜೇಶ್, ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ವಿನಯ್ ಕುಮಾರ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ರಾಜ್ಯಾಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು, ರಾಜ್ಯ ಸಂಚಾಲಕ ಜಿ. ಸುಬ್ರಹ್ಮಣ್ಯ ಪ್ರಸಾದ್, ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ, ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರವೀಂದ್ರ ಎಸ್. ಸಹಿತ ಇತರ ಪ್ರಮುಖರು ಉಪಸ್ಥಿತರಿದ್ದರು.
