ಸಾಹಿತ್ಯದ ಕೃಷಿಯ ಮೂಲಕ ಊರಿನ ಹೆಸರನ್ನು ಜಗದಗಲ ಪಸರಿಸಿದ ಕೀರ್ತಿ ಮುದ್ರಾಡಿಯವರದ್ದು : ಬಲ್ಲಾಡಿ ಚಂದ್ರಶೇಖರ್ ಭಟ್

Date:

spot_img

ಹೆಬ್ರಿ : “ಮುದ್ರಾಡಿಯಂತಹ ಚಿಕ್ಕ ಊರಿನ ಹೆಸರನ್ನು ನಾಡಿನ ಜಗದಗಲ ಪಸರಿಸಿದ ಹಿರಿಮೆ ಅಂಬಾತನಯ ಮುದ್ರಾಡಿಯವರದ್ದು. ನಿವೃತ್ತಿಯ ನಂತರವೂ ವೃತ್ತಿಯಲ್ಲಿ ತೊಡಗಿಕೊಂಡು ಅಪಾರ ಸಾಹಿತ್ಯ ಕೃಷಿಯಲ್ಲಿ ನಲಿದಾಡಿದ ಕಾಯಕ ಯೋಗಿಯವರು. ಸಾಹಿತ್ಯದ ಹತ್ತು- ಹಲವಾರು ಪ್ರಕಾರಗಳಲ್ಲಿ ಕೈಯಾಡಿಸಿ ಸೈ ಎನಿಸಿಕೊಂಡ ಧೀಮಂತರು. ಕಡಿಮೆ ಶಿಕ್ಷಣ ಪಡೆದಿದ್ದರೂ, ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ಪಠ್ಯ ರಚಿಸಿದ ಸಾಧಕ ಅಂಬಾತನಯರು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾಗಿ, ಸಾಹಿತ್ಯ ರಥದ ಚುಕ್ಕಾಣಿಯನ್ನು ಸರಿಯಾದ ದಿಶೆಯಲ್ಲಿ ಜಿಲ್ಲೆಯಾದ್ಯಂತ ವಿನೂತನ ಕಾರ್ಯಕ್ರಮಗಳ ಮೂಲಕ ಜನಮನಕ್ಕೆ ಕೊಂಡು ಹೋದವರು. ನಾಡಿನ ಹಲವಾರು ಖ್ಯಾತನಾಮ ಸಾಹಿತಿಗಳ ಬಳಗದಲ್ಲಿ ಗುರುತಿಸಿಕೊಂಡ ಅಂಬಾತನಯರು ಪಾರ್ತಿಸುಬ್ಬದಂತಹ ಶ್ರೇಷ್ಠ ಪುರಸ್ಕಾರಗಳನ್ನು ಪಡೆದ ಸಾಹಿತ್ಯ ಲೋಕದ ಮಾಣಿಕ್ಯ ” ಎಂದು ಮುದ್ರಾಡಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಹೇಳಿದರು.

ಅವರು ಮುದ್ರಾಡಿಯ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆದ ಊರಿನ ಹಿರಿಯ ಸಾಹಿತಿ ಮತ್ತು ಶಾಲೆಯ ಟ್ರಸ್ಟ್ರಿಯೂ ಆಗಿದ್ದ ಅಂಬಾತನಯ ಮುದ್ರಾಡಿಯವರ ಮೂರನೇ ವರ್ಷದ ಸಂಸ್ಮರಣೆಯಲ್ಲಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಿಕ್ಷಕ ಮಹೇಶ್ ನಾಯ್ಕ ಕೆ. ಮತ್ತು ವಿದ್ಯಾರ್ಥಿ ಪ್ರತೀಕ್ ಅಂಬಾತನಯರ ಬಗ್ಗೆ ವಿಚಾರ ಹಂಚಿಕೊಂಡರು. ಕನ್ನಡ ಭಾಷಾ ಶಿಕ್ಷಕ ಪಿವಿ ಆನಂದ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಶ್ಯಾಮಲಾ ವಂದಿಸಿದರು. ಶಿಕ್ಷಕರಾದ ರಘುಪತಿ ಹೆಬ್ಬಾರ್, ಚಂದ್ರಕಾಂತಿ ಹೆಗ್ಡೆ, ಶಿಕ್ಷಕೇತರ ಸಿಬ್ಬಂದಿ ಮಹೇಶ್ ಎಂ., ಶಾಲಾ ವಿದ್ಯಾರ್ಥಿ ನಾಯಕ ಕಾರ್ತಿಕ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ