spot_img

ಅಂಗನವಾಡಿ ಸಹಾಯಕಿಯ ಕ್ರೂರತೆ! ಮಗುವಿಗೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿದ ಘಟನೆ!

Date:

spot_img

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹರಾಜರಕಟ್ಟೆ ಗ್ರಾಮದಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಸಹಾಯಕಿ ಚಂದ್ರಮ್ಮ ಎಂಬವರು ಮಗು ದೀಕ್ಷಿತ್ ಮೇಲೆ ಹೀನ ಕೃತ್ಯ ಎಸಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪೋಷಕರು ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಗುವಿಗೆ ಹಿಂಸಾತ್ಮಕ ವರ್ತನೆ!
ಮಹರಾಜರಕಟ್ಟೆ ಗ್ರಾಮದ ರಮೇಶ್ ಮತ್ತು ಚೈತ್ರಾ ಅವರ ಮಗು ಅಂಗನವಾಡಿಯಲ್ಲಿ ಹಠ ಮಾಡುತ್ತಿತ್ತೆಂದು ಅಂಗನವಾಡಿ ಸಹಾಯಕಿ ಬರೆ ಎಳೆದಿದ್ದು, ಬಳಿಕ ಮಗು ಧರಿಸಿದ ಡೈಪರ್ ಒಳಗೆ ಖಾರದ ಪುಡಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮಗುವನ್ನು ಕರೆತರಲು ಹೋದ ಪೋಷಕರು ಇದನ್ನು ಗಮನಿಸಿ ತಕ್ಷಣವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನೆ ಭಾರೀ ವಿರೋಧಕ್ಕೆ ಕಾರಣವಾಗಿದ್ದು, ಸಂಬಂಧಿತ ಅಧಿಕಾರಿಗಳು ಚಂದ್ರಮ್ಮನನ್ನು ಅಮಾನತು ಮಾಡಿದ್ದಾರೆ. ಮಕ್ಕಳ ಮೇಲೆ ಹಿಂಸೆ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ಸು ಫ್ರಮ್‌ ಸೋ” ಅಬ್ಬರ: ಸಣ್ಣ ಬಜೆಟ್, ದೊಡ್ಡ ಕಲೆಕ್ಷನ್ – ಇದು ಕಂಟೆಂಟ್ ತಾಕತ್ತು!

ಇತ್ತೀಚೆಗೆ ತೆರೆ ಬಿದ್ದಿದ್ದು, ಜೆ.ಪಿ. ತುಮಿನಾಡ್ ನಿರ್ದೇಶನದ "ಸು ಫ್ರಮ್‌ ಸೋ" ಚಿತ್ರವು ಅದ್ಭುತ ಗೆಲುವು ಸಾಧಿಸಿದೆ. ರಾಜ್ ಬಿ ಶೆಟ್ಟಿ ಅವರ ಲೈಟರ್ ಬುದ್ಧ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು, ಕಥಾವಸ್ತು ಮತ್ತು ನಿರೂಪಣೆಯ ಶಕ್ತಿಗೆ ಪ್ರೇಕ್ಷಕರು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಉಡುಪಿಯಲ್ಲಿ ವರುಣನ ಆರ್ಭಟ: ಆಸ್ತಿಪಾಸ್ತಿಗೆ ಹಾನಿ

ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ 24 ಗಂಟೆಗಳಿಂದ ಬಿಡದೇ ಸುರಿಯುತ್ತಿರುವ ಭಾರೀ ಗಾಳಿ ಮತ್ತು ಮಳೆಯು ವ್ಯಾಪಕ ಅವಾಂತರಗಳನ್ನು ಸೃಷ್ಟಿಸಿದ್ದು, ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ

ಹರಿದ್ವಾರದಲ್ಲಿ ದುರಂತ: ಮಾನಸಾ ದೇವಿ ದೇವಾಲಯದಲ್ಲಿ ಕಾಲ್ತುಳಿತ, 7 ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಪುಣ್ಯಕ್ಷೇತ್ರ ಹರಿದ್ವಾರದಲ್ಲಿರುವ ಪ್ರಸಿದ್ಧ ಮಾನಸಾ ದೇವಿ ದೇವಾಲಯದಲ್ಲಿ ಭಾನುವಾರ (ಜುಲೈ 27) ಸಂಭವಿಸಿದ ದುರದೃಷ್ಟಕರ ಕಾಲ್ತುಳಿತದಲ್ಲಿ ಏಳು ಭಕ್ತರು ಪ್ರಾಣ ಕಳೆದುಕೊಂಡಿದ್ದು, 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ

ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್: ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ, ಸಂಚಾರ ಸ್ಥಗಿತ

ರಾಜ್ಯದಾದ್ಯಂತ ಮುಂಗಾರು ಮಳೆಯ ಅಬ್ಬರ ತೀವ್ರಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ