
ಬೆಂಗಳೂರು: ರಾಜ್ಯದ ಅರಣ್ಯ ಇಲಾಖೆಗಾಗಿ ಖ್ಯಾತ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳು ಹಾಗೂ ಅರಣ್ಯಗಳ ಬಗ್ಗೆ ಅಪಾರ ಕಾಳಜಿ ಇದೆ. ಈ ನಿಟ್ಟಿನಲ್ಲಿ ಅವರು ಯಾವುದೇ ಸಂಭಾವನೆ ಸ್ವೀಕರಿಸದೆ ಈ ಹೊಣೆಗಾರಿಕೆಯನ್ನು ನಿರ್ವಹಿಸಲು ಸಮ್ಮತಿಸಿದ್ದಾರೆ” ಎಂದು ತಿಳಿಸಿದ್ದಾರೆ.
ವನ್ಯಜೀವಿ ಸಂರಕ್ಷಣೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗುತ್ತಿದೆ. ಖ್ಯಾತಿ ಹಾಗೂ ಜನಪ್ರೀಯತೆ ಹೊಂದಿರುವ ಕುಂಬ್ಳೆ ನೇಮಕಾತಿಯಿಂದ ಅರಣ್ಯ ರಕ್ಷಣೆ ಹಾಗೂ ವನ್ಯಜೀವಿ ಸಂರಕ್ಷಣೆಗೆ ಸಹಕಾರಿಯಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.