
ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಆ್ಯಂಕರ್ ಅನುಶ್ರೀ ಅವರ ಮದುವೆಯ ಕುರಿತು ಹಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿತ್ತು. ಇದೀಗ ಅವರ ಮದುವೆ ನಿಗದಿಯಾಗಿರುವ ಬಗ್ಗೆ ಬ್ರೇಕಿಂಗ್ ನ್ಯೂಸ್ ಹೊರಬಿದ್ದಿದ್ದು, ಇದೇ ವರ್ಷ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ವರದಿಯಾಗಿದೆ.
ಲಭ್ಯವಿರುವ ಮೂಲಗಳ ಪ್ರಕಾರ, ಅನುಶ್ರೀ ಅವರು ಕೊಡಗು ಮೂಲದ ಐಟಿ ಉದ್ಯಮಿ ರೋಷನ್ ಅವರೊಂದಿಗೆ ವಿವಾಹವಾಗಲಿದ್ದಾರೆ ಎನ್ನಲಾಗಿದೆ. ಇದು ಮನೆಯವರು ನಿಶ್ಚಯಿಸಿರುವ ಮದುವೆಯಾಗಿದ್ದು, ಬರುವ ಆಗಸ್ಟ್ 28 ರಂದು ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ರೋಷನ್ ಅವರು ಸದ್ಯ ಬೆಂಗಳೂರಿನಲ್ಲಿ ಕಾರ್ಪೋರೇಟ್ ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಿಂದೊಮ್ಮೆ ಸ್ನೇಹಿತರೊಂದಿಗೆ ಮಾತನಾಡುತ್ತಾ ಅನುಶ್ರೀ, “ನಾನು ಇದೇ ವರ್ಷ ಮದುವೆ ಆಗಲಿದ್ದೇನೆ. ಮದುವೆ ಆಗುವ ಹುಡುಗ ರೆಸ್ಪಾನ್ಸಿಬಲ್ ಆಗಿರಬೇಕು. ನನ್ನ ಪರವಾಗಿ ಅಲ್ಲ, ಅವನ ಲೈಫ್ ಪರವಾಗಿ ರೆಸ್ಪಾನ್ಸಿಬಲ್ ಆಗಿದ್ರೆ ಸಾಕು. ಅವನು ಬದುಕಬೇಕು, ನನ್ನನ್ನು ಬದುಕೋಕೆ ಬಿಡಬೇಕು. ಈ ವರ್ಷ ಅನುಶ್ರೀ ಮದುವೆ ಗ್ಯಾರಂಟಿ,” ಎಂದು ಹೇಳಿಕೊಂಡಿದ್ದರು.
ಇದೀಗ ಅವರ ಮದುವೆಯ ಸುದ್ದಿ ಖಚಿತವಾಗಿದ್ದು, ಇದನ್ನು ಕೇಳಿ ಅಭಿಮಾನಿಗಳು ಸಂತಸಗೊಂಡಿದ್ದಾರೆ. ಈ ಕುರಿತು ಅನುಶ್ರೀ ಅಧಿಕೃತ ಹೇಳಿಕೆ ನೀಡುವ ನಿರೀಕ್ಷೆಯಿದೆ.