spot_img

ಯಕ್ಷಗಾನ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ

Date:

ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ. ಜ.23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ‌ ಮಾತೃಭಾಷೆ ತೆಲುಗು. ದೊರೆಸ್ವಾಮಿ ಹಾಗೂ ಲೀಲಾವತಿ ದಂಪತಿ ಪುತ್ರ ಉದ್ಯೋಗ ನಿಮಿತ್ತವಾಗಿ ಜಾರ್ಕಳದಲ್ಲಿ ನೆಲೆಸಿದ್ದರು. ಈಗ ಪೆರ್ಣಂಕಿಲದಲ್ಲಿ ವಾಸವಿದ್ದಾರೆ.
ಧರ್ಮಸ್ಥಳ ತರಬೇತಿ ಶಿಬಿರದಲ್ಲಿ ಯಕ್ಷಗಾನದ ಅಭ್ಯಾಸ ಮಾಡಿ ಕಟೀಲು ಮೇಳಕ್ಕೆ ಸೇರಿಕೊಂಡರು.
ಈಗ ತೆಂಕು ಮತ್ತು ಬಡಗುತಿಟ್ಟಿನಲ್ಲಿ ಬಹು ಬೇಡಿಕೆಯ ಕಲಾವಿದರು.
ಸಾಲಿಗ್ರಾಮ ಮೇಳ ದಲ್ಲಿ ಪ್ರವರ್ಧಮಾನಕ್ಕೆ ಬಂದು ಪ್ರಸ್ತುತ ಬೆಂಕಿನಾಥೇಶ್ವರ ಮೇಳದಲ್ಲಿ ಪ್ರಧಾನ ಹಾಸ್ಯ ಕಲಾವಿದರಾಗಿದ್ದಾರೆ.
ವಿಶಿಷ್ಟ ಶೈಲಿಯ ಆಂಗಿಕ ಅಭಿನಯದಿಂದ ಜನರನ್ನು ನಗೆಗಡಲಲ್ಲಿ ತೇಲಿಸಬಲ್ಲ ಸಮರ್ಥ ಹಾಸ್ಯಗಾರರೆಂಬ ಖ್ಯಾತಿ ಇದೆ. ಶ್ವೇತ ಕುಮಾರ ಚರಿತ್ರೆಯ ಪ್ರೇತದ ಹಾಸ್ಯವಂತೂ ಸ್ಮರಣೀಯ.
ಅಮೆರಿಕ ಹಾಗೂ ಲಂಡನ್‌ನಲ್ಲೂ ಯಕ್ಷಗಾನ ಪ್ರದರ್ಶಿಸಿದ್ದಾರೆ.

ಜ. 23ರಂದು ರಾತ್ರಿ 7.30 ಗಂಟೆಗೆ ಬೆಂಕಿನಾಥೇಶ್ವರ ಮೇಳದವರಿಂದ ಶ್ರೀದೇವಿ ಅಗ್ನಿ ಕಲ್ಲುರ್ಟಿ ತುಳು ಬಯಲಾಟ ನಡೆಯಲಿದೆ.
ಈ ಸಂದರ್ಭ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಾಸಕ ವಿ. ಸುನಿಲ್ ಕುಮಾರ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಎಸ್ ಕೆ ಎಸ್ ಕಾರ್ಕಳ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸುಜಯಕುಮಾರ್ ಶೆಟ್ಟಿ, ಕಾರ್ಕಳ ಬಿಜೆಪಿ ಅಧ್ಯಕ್ಷ ನವೀನ್ ಕುಮಾರ್ ನಾಯಕ್, ಕಾರ್ಕಳ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಜಿತ್ ಹೆಗಡೆ ಮಾಳ ಭಾಗವಹಿಸುವರು. ಯಕ್ಷಗಾನ ಕಲಾವಿದ, ನ್ಯಾಯವಾದಿ ಶ್ರೀ ರಮಣಾಚಾರ್ ಅಭಿನಂದನಾ ಭಾಷಣ ಮಾಡುವರು.
ವರ್ಷಾವಧಿ ಜಾತ್ರೆ
ಜ.21ರಂದು ತೋರಣ ಮುಹೂರ್ತ ಧಾರ್ಮಿಕ ಕಾರ್ಯಕ್ರಮಗಳು, ಜ.22ರಂದು ವರ್ಷಾವಧಿ ಮಹೋತ್ಸವ, ಅನ್ನಸಂತರ್ಪಣೆ, ನೇಮೋತ್ಸವ ನಡೆಯಲಿದೆ ಎಂದು ಧರ್ಮದರ್ಶಿ ಕೃಷ್ಣರಾಜೇಂದ್ರ ಭಟ್‌ ತಿಳಿಸಿದ್ದಾರೆ.

ಫೋಟೋ: ಅರುಣ್ ಕುಮಾರ್ ಜಾರ್ಕಳ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ