



ಇಂದು ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಅರುಣೋದಯ ಪದವಿಪೂರ್ವ ಕಾಲೇಜಿನಲ್ಲಿ ಅಜ್ಜಂಪುರ ಹೋಬಳಿ ಘಟಕದ ಅರುಣೋದಯ ಪದವಿ ಪೂರ್ವ ಕಾಲೇಜಿನ ಉದ್ಘಾಟನಾ ಸಮಾರಂಭ ಹಾಗೂ ಸಾಧಕರಿಗೆ ಗೌರವಾರ್ಪಣೆ ಸಮಾರಂಭವನ್ನು ಕನ್ನಡ ಜಾನಪದ ಪರಿಷತ್ ರಾಜ್ಯದ್ಯಕ್ಷ ಡಾ ಜಾನಪದ ಎಸ್ ಬಾಲಾಜಿ, ಉದ್ಘಾಟನೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕಿನ ಅಧ್ಯಕ್ಷರು ಶ್ರೀಮತಿ ಮಾಲತಿ ವಹಿಸಿಕೊಂಡಿದ್ದರು, ಚಿಕ್ಕಮಗಳೂರು ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಶ್ರೀ ಓಣಿ ತೋಟ ರತ್ನಾಕರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರು ಶ್ರೀಮತಿ ವಿಶಾಲಾಕ್ಷಮ್ಮ, ತಾಲೂಕು ಮಹಿಳಾ ಘಟಕದ ಅಧ್ಯಕ್ಷರು ಶ್ರೀಮತಿ ವಿಜಯ ಕುಮಾರಿ, ಅರುಣೋದಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಶ್ರೀ ರಾಮಚಂದ್ರ, ಸಮಾಜಶಾಸ್ತ್ರ ಉಪನ್ಯಾಸಕ ಶ್ರೀ ಬಾಬು, ಕನ್ನಡ ಉಪನ್ಯಾಸಕ ಓಂಕಾರ ಮೂರ್ತಿ, ಹೋಬಳಿ ಘಟಕದ ಅಧ್ಯಕ್ಷ ಶ್ರೀ ರಮೇಶ್ ನಾಯಕ್ ಉಪಸ್ಥಿತರಿದ್ದರು.