
ಪುತ್ತೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಪುತ್ತೂರಿನ ಶಾಸಕ ಅಶೋಕ್ ರೈ ಅವರು ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕಿಚ್ಚು ಹಚ್ಚಿದೆ. ಅಶೋಕ್ ರೈ ಅವರು ಛಲವಾದಿ ನಾರಾಯಣಸ್ವಾಮಿಯವರ ಬಗ್ಗೆ ಅತ್ಯಂತ ಕೀಳಾಗಿ ಮಾತನಾಡಿರುವುದು ಕೇವಲ ಒಬ್ಬ ವ್ಯಕ್ತಿಗಲ್ಲ, ಇಡೀ ದಲಿತ ಸಮುದಾಯಕ್ಕೆ ಮಾಡಿದ ಅಪಮಾನ ಎಂದು ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾದ ಉಪಾಧ್ಯಕ್ಷ ದಿನಕರ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಚ್ಚರಿಕೆ ನೀಡಿರುವ ಅವರು, “ಶಾಸಕರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆದು ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಒಂದು ವೇಳೆ ಅವರು ಕ್ಷಮೆ ಕೇಳಲು ವಿಳಂಬ ಮಾಡಿದರೆ, ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು,” ಎಂದು ಎಚ್ಚರಿಸಿದ್ದಾರೆ.



































