
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ “ಸರಕಾರದ ನಡೆ, ಕಾರ್ಯಕರ್ತರ ಕಡೆ” ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.
ಅವರು, “ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಬಹುಮತದಿಂದ ಗೆಲುವು ಸಾಧಿಸಲಿದೆ. ತುಳುನಾಡಿನಿಂದ ಕನಿಷ್ಠ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ,” ಎಂದು ಭರವಸೆ ವ್ಯಕ್ತಪಡಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗುತ್ತಿದ್ದು, ಕಾರ್ಯಕರ್ತರು ಆತ್ಮವಿಶ್ವಾಸದಿಂದ ಇದನ್ನು ಎದುರಿಸಬೇಕು. “ಸರ್ಕಾರದ ಸಾಧನೆಗಳೇ ಕಾಂಗ್ರೆಸ್‌ಗೆ ಬಲವಾಗಿ ನಿಂತಿವೆ. ಕಾಂಗ್ರೆಸ್ ಜನರ ಬದುಕನ್ನು ಕಟ್ಟುವಲ್ಲಿ ತೊಡಗಿದೆ, ಆದರೆ ಬಿಜೆಪಿ ಭಾವನೆಗಳ ರಾಜಕೀಯ ಮಾಡುತ್ತಿದೆ,” ಎಂದರು.
“ಯಾರೂ ಶಾಶ್ವತವಾಗಿ ಅಧಿಕಾರದಲ್ಲಿರುವುದಿಲ್ಲ. ಆದರೆ ಜನರ ಮನಸ್ಸು ಗೆಲ್ಲುವುದು ಶಾಶ್ವತ,” ಎಂದು ಡಿಕೆಶಿ ಕಾರ್ಯಕರ್ತರಿಗೆ ಆದರ್ಶ ಸಂದೇಶ ನೀಡಿದರು.