ಆತ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂಭ್ರಮ

Date:

spot_img

ಉಡುಪಿ :ಆತ್ರಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಶಾಲಾ ಆವರಣದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಜರುಗಿತು.

ಬೆಳಿಗ್ಗೆ ಧ್ವಜಾರೋಹಣವನ್ನು SDMC ಅಧ್ಯಕ್ಷೆ ಶ್ರೀಮತಿ ಸಬೀನಾರವರ ಅಧ್ಯಕ್ಷತೆಯಲ್ಲಿ ಪರ್ಕಳ ಪ್ರೌಢಶಾಲಾ ಸಂಚಾಲಕರಾದ ಶ್ರೀ ದಿನೇಶ್ ಹೆಗ್ಡೆ ಆತ್ರಾಡಿ ಇವರು ನೆರವೇರಿಸಿದರು. ನಂತರ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ SDMC ಮಾಜಿ ಅಧ್ಯಕ್ಷರುಗಳಾದ ಶ್ರೀಮತಿ ಶ್ಯಾಮಲಾ ಪ್ರಭು, ಶ್ರೀ ಅಬ್ದುಲ್ ರಹಿಮಾನ್, ಶ್ರೀ ಹಳೆ ವಿದ್ಯಾರ್ಥಿ ಅಶೋಕ್ ಕಾಂಚನ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀ ಇಸ್ಮಾಯಿಲ್ ಆತ್ರಾಡಿ, ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ರೂಪ ಶೆಟ್ಟಿ, ಸದಸ್ಯರಾದ ಶ್ರೀಮತಿ ಪ್ರತಿಮಾ ನಾಯ್ಕ್, ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಎನ್, ಅಂಗನವಾಡಿ ಶಿಕ್ಷಕಿ ಶ್ರೀಮತಿ ಜಯಂತಿ, ವಿದ್ಯಾರ್ಥಿ ನಾಯಕ ಮಾ. ಸಮರ್ಥ್ ಮುಂತಾದವರು ಉಪಸ್ಥಿತರಿದ್ದರು.

ಸಂಜೆಯ ಸಭಾ ಕಾರ್ಯಕ್ರಮವು ಪಂಚಾಯತ್ ಅಧ್ಯಕ್ಷರಾದ ಶ್ರೀ ಹರೀಶ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರಗಿತು. ವೇದಿಕೆಯಲ್ಲಿ ಉಡುಪಿ ರಂಗಭೂಮಿ ಕಾರ್ಯದರ್ಶಿ ಶ್ರೀ ಪ್ರದೀಪ್ ಚಂದ್ರ ಕುತ್ಪಾಡಿ, ಹಿರಿಯಡ್ಕ ಲಯನ್ಸ್ ಅಧ್ಯಕ್ಷರಾದ ಶ್ರೀ ರಘುವೀರ್ ಶೆಟ್ಟಿಗಾರ್, ಪ್ರಖ್ಯಾತ ವೈದ್ಯರಾದ ಡಾ. ಸತೀಶ್ ಶೆಟ್ಟಿ, ಆತ್ರಾಡಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀ ಪ್ರದೀಪ್ ಕುಮಾರ್, SDMC ಅಧ್ಯಕ್ಷೆ ಶ್ರೀಮತಿ ಸಬೀನಾ, ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶಾರದಾ ಶೆಟ್ಟಿಗಾರ್, ಸ್ಥಳೀಯ ವಾರ್ಡ್ ಪಂಚಾಯತ್ ಸದಸ್ಯರಾದ ಶ್ರೀ ಗಂಗಾಧರ್ ಪ್ರಭು, ಶ್ರೀಮತಿ ಹರಿಣಿ ಶೆಟ್ಟಿ, ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ರೂಪ ಶೆಟ್ಟಿ, ಸದಸ್ಯರಾದ ಶ್ರೀ ಇಸ್ಮಾಯಿಲ್ ಆತ್ರಾಡಿ, ಶ್ರೀಮತಿ ಪ್ರತಿಮಾ ನಾಯ್ಕ್, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷರಾದ ಶ್ರೀ ಸೈಮಕಾಂತ್ ಶೆಟ್ಟಿ, ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಸದಸ್ಯರಾದ ಶ್ರೀ ಹರೀಶ್ ಹೆಗ್ಡೆ, ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಎನ್, ಅಂಗನವಾಡಿ ಶಿಕ್ಷಕಿ ಶ್ರೀಮತಿ ಜಯಂತಿ, ವಿದ್ಯಾರ್ಥಿ ನಾಯಕ ಮಾಸ್ಟರ್ ಸಮರ್ಥ್ ಮುಂತಾದವರು ಉಪಸ್ಥಿತರಿದ್ದರು.

ಮೊದಲಿಗೆ ಶಾಲಾ ಮಕ್ಕಳಿಂದ ಪ್ರಾರ್ಥನೆ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಸತ್ಯಾನಂದ ನಾಯಕ್ ಆತ್ರಾಡಿ ಇವರು ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯಶಿಕ್ಷಕಿ ಶ್ರೀಮತಿ ಸರಸ್ವತಿ ಎನ್ ಇವರು ಕಳೆದ ಎರಡು ವರ್ಷಗಳ ಶಾಲಾ ವರದಿ ವಾಚನ ಮಾಡಿದರು. ಹಳೆ ವಿದ್ಯಾರ್ಥಿ ಸಂಘದ ವರದಿ ಯನ್ನು ಕಾರ್ಯದರ್ಶಿ ಶ್ರೀ ಇಸ್ಮಾಯಿಲ್ ರವರು ಮಾಡಿದರು. ನಂತರ ಕಲಿಯುವಿಕೆಯಲ್ಲಿ ಉತ್ತಮ ಸಾಧನೆ ಮಾಡಿರುವ ಮಕ್ಕಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಬಹುಮಾನಿತರ ಹೆಸರುಗಳನ್ನು ಶಿಕ್ಷಕಿ ಶ್ರೀಮತಿ ಶಾರದಾರವರು ವಾಚಿಸಿದರು.

ಸಾಧಕರಿಗೆ ಗೌರವ

ಕಾರ್ಯಕ್ರಮದ ವಿಶೇಷ ಅತಿಥಿ ಉಡುಪಿ ರಂಗಭೂಮಿ ಸಂಚಾಲಕರು ಮತ್ತು 5 ತುಳು ಚಲನ ಚಿತ್ರ ಗಳಲ್ಲಿ ನಾಯಕ ನಟನಾಗಿ ಜತೆಗೆ 8 ಕನ್ನಡ ಚಲನ ಚಿತ್ರ ಗಳಲ್ಲಿ ಅಭಿನಯ ಮಾಡಿ ನಿನಗಾಗಿ, ನನ್ನರಸಿ ರಾಧೆ, ರಾಣಿ, ನಿಹಾರಿಕ, ಪ್ರೇಮ ಲೋಕ, ಮುಕ್ತ, ಒಲವೇ ಜೀವನ ಮುಂತಾದ 15 ಕ್ಕೂ ಹೆಚ್ಚಿನ ಕನ್ನಡ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಮೇರು ನಟ ಶ್ರೀ ಪ್ರದೀಪ್ ಚಂದ್ರ ಕುತ್ಪಾಡಿ ಇವರನ್ನು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಪ್ರದೀಪ್ ಚಂದ್ರರವರು ದೊಡ್ಡ ದೊಡ್ಡ ಸಾಧನೆ ಗಳನ್ನು ಮಾಡಿ ದೇಶಕ್ಕೆ ಮಾದರಿಯಾಗಿರುವ ಮಹನೀಯರು ಸರಕಾರಿ ಶಾಲೆಯಲ್ಲಿ ಕಲಿತವರೇ ಆಗಿದ್ದಾರೆ. ಸರಕಾರಿ ಶಾಲೆಗಳಲ್ಲಿ ಸಂಸ್ಕಾರಯುತ ಶಿಕ್ಷಣ ದೊರೆಯುತ್ತಿದೆ. ರಂಗ ನಟನೆಯಿಂದ ಮೆದುಳು ಚುರುಕಾಗುತ್ತದೆ. ಇದು ನಮ್ಮೆಲ್ಲರ ಶಿಕ್ಷಣದಲ್ಲಿ ಸಾಧನೆ ಮಾಡಲು ಸಹಕಾರಿಯಾಗಿದೆ ಎಂದು ತಿಳಿಸಿದರು ಹಾಗೂ ಸರಕಾರಿ ಶಾಲೆಗೆ ಮಹತ್ತರ ಕೊಡುಗೆ ನೀಡುತ್ತಿರುವ ಗ್ರಾಮಸ್ಥರನ್ನು ಕೊಂಡಾಡಿದರು.

ಕಳೆದ ಹಲವು ವರ್ಷಗಳಿಂದ ಶಾಲೆಗೆ ಉಚಿತವಾಗಿ ತರಕಾರಿಯನ್ನು ನೀಡುತ್ತಿರುವ ಮತ್ತು ಜೈ ಹನುಮಾನ್ ಸಂಘ, ಗಣೇಶೋತ್ಸವ ಸಮಿತಿ, ಸವ್ಯ ಸಾಚಿ ಶಿಶು ಮಂದಿರ ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಗತಿ ಪರ ರೈತ, ಹಳೆ ವಿದ್ಯಾರ್ಥಿ ಶ್ರೀ ಲಕ್ಷ್ಮೀ ನಾರಾಯಣ ನಾಯಕ್, ಮತ್ತು ಸರಕಾರಿ ಶಾಲೆಯಲ್ಲಿ ಕಲಿತು ರಾಷ್ಟ್ರೀಯ ಮಟ್ಟದ ವೈದ್ಯಕೀಯ ನೀಟ್ ಪರೀಕ್ಷೆಯಲ್ಲಿ ಮತ್ತು JEE ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಜತೆಗೆ ಅಥ್ಲೆಟಿಕ್, ಕ್ರಿಕೆಟ್, ಫೂಟ್ ಬಾಲ್ ಮುಂತಾದ ಕ್ರೀಡೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ , ಕೃಷಿ ಚಟುವಟಿಕೆಯಲ್ಲಿ ಆಸಕ್ತಿ ಇರುವ ಹೆಮ್ಮೆಯ ಹಳೆ ವಿದ್ಯಾರ್ಥಿನಿ ಕುಮಾರಿ ಲತಾ ಇವರನ್ನೂಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸನ್ಮಾನಿತರ ಸನ್ಮಾನ ಪತ್ರವನ್ನು ಮುಖ್ಯ ಶಿಕ್ಷಕಿ ಶ್ರೀಮತಿ ಸರಸ್ವತಿ ಎನ್ ಮತ್ತು ಶಿಕ್ಷಕಿ ಶ್ರೀಮತಿ ವಿಮಲಾರವರು ವಾಚಿಸಿದರು.

ಸಾಂಸ್ಕೃತಿಕ ರಸದೌತಣ

ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ಆಕರ್ಷಕ ನೃತ್ಯ ಕಾರ್ಯಕ್ರಮ ಜರಗಿತು. ಹಳೆ ವಿದ್ಯಾರ್ಥಿಗಳ ನೃತ್ಯಗಳು ಪ್ರದರ್ಶನ ಗೊಂಡವು. ಶಿಕ್ಷಕಿ ಶ್ರೀಮತಿ ಜ್ಯೋತಿಯವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದವನ್ನಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿಯರಾದ ಶ್ರೀಮತಿ ಶಬಾನಾ ಪರ್ವೀನ್ ಶೇಖ್ ಮತ್ತು ಶ್ರೀಮತಿ ಸುಹಾಸಿನಿ ಯವರು ಅಚ್ಚುಕಟ್ಟಾಗಿ ನಿರ್ವಹಿಸಿದರು.

ಕೊನೆಯಲ್ಲಿ ಹಳೆವಿದ್ಯಾರ್ಥಿಗಳಿಂದ ” ಆರ್ ಕೊರ್ಪೆರ್ ” ತುಳು ಹಾಸ್ಯಮಯ ನಾಟಕ ಪ್ರದರ್ಶನ ಗೊಂಡಿತು. ಇದಕ್ಕೂ ಮುನ್ನ ನಾಟಕದ ಕತೆ ಬರೆದಿರುವ ಶ್ರೀ ಚಂದ್ರ ಶೇಖರ್ ಸರಳೆಬೆಟ್ಟು, ಸಂಗೀತ ಸಂಯೋಜನೆ ಮಾಡಿರುವ ರಾಜ್ಯ ಪ್ರಶಸ್ತಿ ವಿಜೇತ ಬರವುದ ಬೊಳ್ಳಿ ಶ್ರೀ ರಾಜೇಶ್ ಆಚಾರ್ಯ ಪರ್ಕಳ, ನಿರ್ದೇಶಕ ಜಿಲ್ಲಾ ಪ್ರಶಸ್ತಿ ವಿಜೇತ ಶ್ರೀ ಪಾಂಡುರಂಗ ಪ್ರಭು ಇವರುಗಳನ್ನು ಸನ್ಮಾನ ಮಾಡಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.