
ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಆಸ್ಪತ್ರೆಯ ಆವರಣದಲ್ಲಿ ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಆರೋಪಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಆಗಸ್ಟ್ 6 ರಂದು ರಾತ್ರಿ, ಖಾಸಗಿ ಸುದ್ದಿವಾಹಿನಿಯ ವರದಿಗಾರ ಹರೀಶ್ ಮತ್ತು ಕ್ಯಾಮರಾಮನ್ ನವೀನ್ ಪೂಜಾರಿ ಅವರ ಮೇಲೆ ಹಲ್ಲೆ ನಡೆದಿತ್ತು. ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲೆ ನಡೆದ ಹಲ್ಲೆ ಪ್ರಕರಣದ ಬಗ್ಗೆ ವರದಿ ಮಾಡಲು ಈ ತಂಡವು ಆಸ್ಪತ್ರೆಗೆ ತೆರಳಿತ್ತು.
ಈ ಸಂದರ್ಭದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಸಮೀರ್ ಎಂ.ಡಿ., ಜಯಂತ್ ಟಿ. ಸೇರಿದಂತೆ ಇತರರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಗಾರ ಹರೀಶ್ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು, ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 115(2), 189(2), 191(2), 351(2), 352, ಮತ್ತು 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.