
ಪಳ್ಳಿ-ನಿಂಜೂರು : ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ, ಮಹಿಳಾ ಮಂಡಳಿ, ಮತ್ತು ಭಜನಾ ಮಂಡಳಿಗಳ ನೇತೃತ್ವದಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಜೊತೆಗೆ, ಪ್ರಾಥಮಿಕ ಆರೋಗ್ಯ ಕೇಂದ್ರ ಪಳ್ಳಿ-ನಿಂಜೂರು ವತಿಯಿಂದ ಆರೋಗ್ಯ ತಪಾಸಣೆ ಮತ್ತು ಕಾರ್ಕಳ ಪೊಲೀಸ್ ಇಲಾಖೆಯಿಂದ “ಮನೆ ಮನೆಗೆ ಪೊಲೀಸ್” ಉಪಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು.
ಈ ಎಲ್ಲಾ ಕಾರ್ಯಕ್ರಮಗಳು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಜಿ. ಆಚಾರ್ಯ, ಮಹಿಳಾ ಮಂಡಳಿಯ ಅಧ್ಯಕ್ಷರಾದ ವೀಣಾ ಆಚಾರ್ಯ, ಮತ್ತು ಪಳ್ಳಿ-ನಿಂಜೂರು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರಾದ ಗೋಪಾಲ ಆಚಾರ್ಯ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಪ್ರಾಥಮಿಕ ಆರೋಗ್ಯ ಕೇಂದ್ರ ಪಳ್ಳಿ-ನಿಂಜೂರು ಇಲ್ಲಿಯ ವೈದ್ಯಾಧಿಕಾರಿಯಾದ ಡಾ. ಅರುಣ್ ಅವರು ಆರೋಗ್ಯದ ಕುರಿತು ಉಪಯುಕ್ತ ಮಾಹಿತಿಗಳನ್ನು ನೀಡಿದರು. ಕಾರ್ಕಳ ಪೊಲೀಸ್ ಇಲಾಖೆಯ ಪಿಎಸ್‌ಐ ಕೃಷ್ಣ ಆಚಾರ್ಯ, ರಾಜೇಶ್ ಡಿ., ಮತ್ತು ಲೋಕೇಶ್ ಅವರು ‘ಮನೆ ಮನೆಗೆ ಪೊಲೀಸ್’ ಉಪಕ್ರಮದ ಕುರಿತು ಅಮೂಲ್ಯ ಮಾಹಿತಿಗಳನ್ನು ಸಭಿಕರೊಂದಿಗೆ ಹಂಚಿಕೊಂಡರು.

ಶ್ರೀ ವಿಶ್ವಕರ್ಮ ಕಾಳಿಕಾಂಬಾ ಮಹಿಳಾ ಮಂಡಳಿಯು “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನೆರವೇರಿಸಿತು. ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರು, ಮಹಿಳಾ ಮಂಡಳಿಯ ಉಪಾಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.