
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಲದ ಒತ್ತಡದಿಂದ ಆಟೋ ರಿಕ್ಷಾ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ಪುತ್ತೂರು ಸಮೀಪದ ಪೆರಿಯತ್ತೋಡಿಯಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ದಿ. ಹುಕ್ರಪ್ಪ ಗೌಡ ಅವರ ಪುತ್ರ ಕೃಷ್ಣ (40) ಆತ್ಮಹತ್ಯೆ ಮಾಡಿಕೊಂಡವರು. ಬೆಳಿಗ್ಗೆ ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ದಿದ್ದ ಅವರು, ಮಧ್ಯಾಹ್ನ ಸಾಲ ವಸೂಲಿಗಾರರ ಕರೆ ಬಂದ ಬೆನ್ನಲ್ಲೇ ಮನೆಯ ಬಳಿ ಇರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.