
ಅಯೋಧ್ಯೆ: ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ಭದ್ರತಾ ಪಡೆಗಳು ಫರಿದಾಬಾದ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿವೆ. ಗುಜರಾತ್ ಎಟಿಎಸ್, ಕೇಂದ್ರ ಏಜೆನ್ಸಿಗಳು ಮತ್ತು ಫರಿದಾಬಾದ್ ಎಸ್‌ಟಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿವೆ.
ಮಂದಿರದ ಭದ್ರತೆ ಕುರಿತು ನಿರಂತರ ನಿಗಾ ಇರಿಸಲಾಗಿತ್ತು. ಈ ಹಿನ್ನೆಲೆ, ಶಂಕಿತ ಉಗ್ರನ ಮೇಲೆ ಭದ್ರತಾ ಅಧಿಕಾರಿಗಳಿಗೆ ಅನುಮಾನ ಮೂಡಿದ್ದು, ಸೂಕ್ತ ಸಮಯದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
ಆರೋಪಿಯು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನಾ? ಎಂಬುದರ ಬಗ್ಗೆ ತನಿಖೆ ಆರಂಭಿಸಲಾಗಿದೆ. ಪ್ರಸ್ತುತ ನಿಗದಿತ ಸ್ಥಳದಲ್ಲಿ ಅವನನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಬೆಳವಣಿಗೆಯಿಂದ ರಾಮಮಂದಿರದ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಚರ್ಚೆ ನಡೆಸಿದೆ.