ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ

Date:

spot_img

ಬಾಗಲಕೋಟೆ: ನಗರದಲ್ಲಿ ಗುರುವಾರ ರಾತ್ರಿ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಕಿಡಿಗೇಡಿಗಳು ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿದ್ಧಾರ್ಥ ಗೋಯಲ್ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಬಾಗಲಕೋಟೆಯ ಅಂಬಾಭವಾನಿ ದೇವಾಲಯದಿಂದ ಆರಂಭವಾದ ಶಿವಾಜಿ ಜಯಂತಿಯ ಭವ್ಯ ಶೋಭಾಯಾತ್ರೆಯು ಎಂಜಿ ರಸ್ತೆಯ ಮೂಲಕ ಸಾಗುತ್ತಿತ್ತು. ಮೆರವಣಿಗೆಯು ಫಂಕಾ ಮಸೀದಿಯ ಮುಂಭಾಗಕ್ಕೆ ಬಂದಾಗ, ‘ಬನಾಯೇಂಗೇ ಮಂದಿರ’ ಎಂಬ ಹಾಡು ಮೊಳಗಿದೆ. ಈ ವೇಳೆ ಮೆರವಣಿಗೆಯಲ್ಲಿದ್ದ ಯುವಕರು ನೃತ್ಯ ಮಾಡುತ್ತಿದ್ದಾಗ, ಒಂದು ಕೋಮಿನ ಕಿಡಿಗೇಡಿಗಳು ಮಸೀದಿಯ ಒಳಗಿನಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಗಲಾಟೆ ಆರಂಭಿಸಿದ್ದಾರೆ. ವಾಗ್ವಾದ ವಿಕೋಪಕ್ಕೆ ತಿರುಗುತ್ತಿದ್ದಂತೆ ಮಸೀದಿಯ ಒಳಗಿನಿಂದ ಏಕಾಏಕಿ ಕಲ್ಲು ತೂರಾಟ ನಡೆಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳದಲ್ಲಿದ್ದ ಎಸ್ಪಿ ಸಿದ್ಧಾರ್ಥ ಗೋಯಲ್ ಅವರ ತಲೆಗೆ ನೇರವಾಗಿ ಕಲ್ಲೇಟು ಬಿದ್ದಿದ್ದು, ತೀವ್ರ ರಕ್ತಸ್ರಾವವಾಗಿದೆ. ತಲೆಗೆ ಪೆಟ್ಟು ಬಿದ್ದರೂ ಧೃತಿಗೆಡದ ಎಸ್ಪಿ, ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ಶಾಂತಿ ಕಾಪಾಡಲು ಶ್ರಮಿಸಿದ್ದಾರೆ.

ಘಟನೆಯ ನಂತರ ಇಡೀ ನಗರದಲ್ಲಿ ಆತಂಕದ ಛಾಯೆ ಆವರಿಸಿದ್ದು, ಹಳೆಯ ಬಾಗಲಕೋಟೆ, ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ಕಲ್ಲು ತೂರಾಟ ನಡೆಸಿದ ತನ್ವೀರ್, ಮುಜಾಮಿಲ್, ಸದ್ದಾಂ ಸೇರಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಜಿಲ್ಲಾಡಳಿತವು ಫೆಬ್ರವರಿ 24ರ ವರೆಗೆ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗಾಯಾಳು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.