ಸ್ಲೋ ಪಾಯಿಸನ್ ಹಾಕಿ ಗಂಡನನ್ನು ಕೊಂದ ರೀಲ್ಸ್ ರಾಣಿ ಪ್ರತಿಮಾಳ ಜಾಮೀನು ಅರ್ಜಿ ತಿರಸ್ಕೃತ !

Date:

spot_img

ಕಾರ್ಕಳ : ಅಜೆಕಾರು ಗ್ರಾಮದ ದೆಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆಗಿರುವ ಅವರ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಂಚಾರಿ ಪೀಠದ ನ್ಯಾಯಾಧೀಶ ಸಮೀವುಲ್ಲಾ, ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಅವರ ವಾದ ಆಲಿಸಿದ ನಂತರ ಜಾಮೀನು ನೀಡಲು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.

ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ದಿಲೀಪ್ ಹೆಗ್ಡೆ ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದರೂ, ಅದನ್ನೂ ನ್ಯಾಯಾಲಯ ತಿರಸ್ಕರಿಸಿತ್ತು. ಈ ಮೂಲಕ ಪ್ರಕರಣದ ಎರಡೂ ಪ್ರಮುಖ ಆರೋಪಿಗಳು ನ್ಯಾಯಾಂಗ ಬಂಧನದಲ್ಲೇ ಉಳಿದಿದ್ದಾರೆ.

ಪ್ರಕರಣದ ಹಿನ್ನೆಲೆ:
2024ರ ಅಕ್ಟೋಬರ್ 20ರಂದು ಮರ್ಣಿ ಗ್ರಾಮದ ಅಜೆಕಾರು ಪ್ರದೇಶದಲ್ಲಿ ಬಾಲಕೃಷ್ಣ ಪೂಜಾರಿ ಕೊಲೆಯಾಗಿದ್ದರು. ತನಿಖೆಯಲ್ಲಿ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ ಎನ್ನಲಾದ ದಿಲೀಪ್ ಹೆಗ್ಡೆ ಮುಖ್ಯ ಆರೋಪಿಗಳೆಂದು ತಿಳಿದುಬಂದಿದೆ.

ಇವರಿಬ್ಬರು ಕೊಲೆಗೆ ಸಂಚು ರೂಪಿಸಿ, ಕೃತ್ಯ ಎಸಗಿದರೆಂದು ಆರೋಪ ಕೇಳಿಬಂದಿದ್ದು ಘಟನೆಯ ಬಳಿಕ ಆಗಸ್ಟ್ 25ರಂದು ಪೊಲೀಸರು ಆರೋಪಿಗಳನ್ನು ಬಂಧಿಸಿ, ತನಿಖೆ ಆರಂಭಿಸಿದ್ದರು.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ನ್ಯಾಯಾಲಯ ಜಾಮೀನು ನಿರಾಕರಿಸಿರುವುದು ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.