ಬಳ್ಳಾರಿಯಲ್ಲಿ 4,596 ಮ್ಯೂಲ್ ಖಾತೆಗಳ ಪತ್ತೆ; ಸೈಬರ್ ಪೊಲೀಸರಿಂದ ಭಾರಿ ಬೇಟೆ

Date:

spot_img

ಬಳ್ಳಾರಿ : ಡಿಜಿಟಲ್ ಲೋಕದಲ್ಲಿ ಅಮಾಯಕರ ಹೆಸರಿನಲ್ಲಿ ನಡೆಯುತ್ತಿರುವ ಭಾರಿ ಹಣಕಾಸು ವಂಚನೆಗೆ ಕಡಿವಾಣ ಹಾಕಲು ಸೈಬರ್ ಕ್ರೈಂ ಪೊಲೀಸರು ಈಗ ಹದ್ದಿನ ಕಣ್ಣಿಟ್ಟಿದ್ದಾರೆ. ಆನ್‌ಲೈನ್ ವಂಚನೆಯ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲು ಬಳಸಲಾಗುವ ‘ಮ್ಯೂಲ್ ಖಾತೆ’ಗಳ (Mule Accounts) ವಿರುದ್ಧ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪೊಲೀಸರು ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದಾರೆ.

ದೇಶದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಅತ್ಯಾಧುನಿಕ ‘ಸೈಬರ್ ಕಮಾಂಡ್ ಸೆಂಟರ್’ (CCC) ಸ್ಥಾಪಿಸಲಾಗಿದ್ದು, ಈ ಘಟಕವು ರಾಜ್ಯಾದ್ಯಂತ ಹರಡಿರುವ ಸಾವಿರಾರು ನಕಲಿ ಹಾಗೂ ಅಕ್ರಮ ಖಾತೆಗಳ ಜಾಲವನ್ನು ಪತ್ತೆ ಮಾಡಿದೆ. ಸಿಐಡಿ ನೀಡಿದ ಮಾಹಿತಿಯಂತೆ ಬಳ್ಳಾರಿ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 4,596 ಮ್ಯೂಲ್ ಖಾತೆಗಳಿರುವುದು ದೃಢಪಟ್ಟಿದೆ. ಈ ಪೈಕಿ 1,140 ಖಾತೆಗಳು ವಿಜಯನಗರ ಜಿಲ್ಲೆಗೆ ಸೇರಿದ್ದಾಗಿದ್ದು, ಅವುಗಳ ತನಿಖೆಯನ್ನು ಅಲ್ಲಿನ ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ಉಳಿದ 3,456 ಖಾತೆಗಳ ಬಗ್ಗೆ ಬಳ್ಳಾರಿ ಸಿಸಿಪಿಎಸ್ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ವಂಚಕರು ಸಾಮಾನ್ಯವಾಗಿ ಕೂಲಿ ಕಾರ್ಮಿಕರು, ಮನೆ ಕೆಲಸದವರು ಮತ್ತು ಸಣ್ಣ ವ್ಯಾಪಾರಿಗಳಿಗೆ ಹಣದ ಆಮಿಷವೊಡ್ಡಿ ಅವರ ಕೆವೈಸಿ ದಾಖಲೆಗಳನ್ನು ಪಡೆದು ಇಂತಹ ಖಾತೆಗಳನ್ನು ತೆರೆಯುತ್ತಾರೆ. ಪ್ರಸ್ತುತ 175 ಖಾತೆಗಳ ವಿವರಗಳನ್ನು ಬ್ಯಾಂಕ್‌ಗಳಿಂದ ಪಡೆಯಲಾಗಿದ್ದು, 40 ಖಾತೆಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 2 ಖಾತೆಗಳಲ್ಲಿ ಅಕ್ರಮ ವಹಿವಾಟು ನಡೆದಿರುವುದು ಸಾಬೀತಾಗಿದ್ದು, ಈಗಾಗಲೇ 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರು ತಮ್ಮ ದಾಖಲೆಗಳನ್ನು ಅಪರಿಚಿತರಿಗೆ ನೀಡಬಾರದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.