ಕಾಲ್ ಗರ್ಲ್ ಸೇವೆ ಆಮಿಷಕ್ಕೆ ಬಲಿಯಾದ ಬೆಂಗಳೂರು ಟೆಕ್ಕಿ; ₹1.5 ಲಕ್ಷ ಕಳೆದುಕೊಂಡು ದೂರು!

Date:

spot_img

ಬೆಂಗಳೂರು: ಆನ್‌ಲೈನ್‌ನಲ್ಲಿ ಕಾಲ್ ಗರ್ಲ್ ಸೇವೆ ಪಡೆಯಲು ಹೋಗಿ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು 1.49 ಲಕ್ಷ ರೂ. ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ.

ಟೆಲಿಗ್ರಾಂನಲ್ಲಿ ಶುರುವಾದ ಕೃತ್ಯ

24 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ಟೆಲಿಗ್ರಾಮ್‌ನಲ್ಲಿ ಬಂದಿದ್ದ ಲಿಂಕ್ ಒಂದನ್ನು ಕ್ಲಿಕ್ ಮಾಡಿದ್ದರು. ಕಾಲ್ ಗರ್ಲ್ ಮತ್ತು ಸ್ಪಾ ಸೇವೆಗಳನ್ನು ನೀಡುವುದಾಗಿ ಹೇಳಿಕೊಂಡಿದ್ದ ‘ಇಶಾನಿ ರೆಡ್ಡಿ’ ಎಂಬುವವಳ ಜೊತೆ ಸಂವಹನ ನಡೆಸಿದ್ದಾರೆ. ಆರಂಭದಲ್ಲಿ 299 ರೂ. ಪಾವತಿಸುವಂತೆ ಹೇಳಿದ ಆಕೆ, ನಂತರ ವಿವಿಧ ಸೇವಾ ಶುಲ್ಕಗಳ ನೆಪದಲ್ಲಿ ಹಂತ ಹಂತವಾಗಿ ಹಣ ವರ್ಗಾಯಿಸುವಂತೆ ಒತ್ತಾಯಿಸಿದ್ದಳು.

ಹೀಗೆ, ಟೆಕ್ಕಿಯಿಂದ ಒಟ್ಟು 1,49,052 ರೂ.ಗಳನ್ನು ಆಕೆ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾಳೆ. ಮೊತ್ತ ಹೆಚ್ಚಾಗಿದ್ದರಿಂದ ಅನುಮಾನಗೊಂಡ ಟೆಕ್ಕಿ, ಸೇವೆ ಬೇಡ ಎಂದು ಹೇಳಿ ಪಾವತಿಸಿದ ಹಣವನ್ನು ಮರಳಿ ಕೊಡುವಂತೆ ಕೇಳಿದ್ದಾರೆ. ಆದರೆ, ವಂಚಕಿಯ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಾರದೆ, ಸಂಪರ್ಕ ಕಡಿತಗೊಂಡಿದೆ.

ವಂಚನೆಗೊಳಗಾದ ಟೆಕ್ಕಿ, ತಕ್ಷಣ ರಾಷ್ಟ್ರೀಯ ಸೈಬರ್ ಅಪರಾಧ ಪೋರ್ಟಲ್‌ನಲ್ಲಿ ದೂರು ಸಲ್ಲಿಸಿದ್ದಾರೆ. ನಂತರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.