ಟೆಕಿ ಸಾವಿನ ಹಿಂದೆ ಅಡಗಿದ್ದ ಕಾಮುಕನ ವಿಕೃತಿ: ಶರ್ಮಿಳಾ ಸಾವಿನ ಕೇಸ್‌ಗೆ ಬಿಗ್ ಟ್ವಿಸ್ಟ್ ಕೊಟ್ಟ ಮರಣೋತ್ತರ ಪರೀಕ್ಷೆ!

Date:

spot_img

ಬೆಂಗಳೂರು: ರಾಜಧಾನಿಯ ರಾಮಮೂರ್ತಿನಗರದಲ್ಲಿ ಇತ್ತೀಚೆಗೆ ನಡೆದಿದ್ದ ಮಂಗಳೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಶರ್ಮಿಳಾ ಅವರ ನಿಗೂಢ ಸಾವು ಇದೀಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಆಕಸ್ಮಿಕ ಅಗ್ನಿ ಅವಘಡ ಎಂದು ಭಾವಿಸಲಾಗಿದ್ದ ಈ ಘಟನೆ, ವಾಸ್ತವದಲ್ಲಿ ಕಾಮೋನ್ಮಾದದಿಂದ ನಡೆದ ಭೀಕರ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಸಾಬೀತಾಗಿದೆ. ಈ ಅಮಾನವೀಯ ಕೃತ್ಯಕ್ಕೆ ಸಂಬಂಧಿಸಿದಂತೆ ನೆರೆಮನೆಯಲ್ಲಿದ್ದ 18 ವರ್ಷದ ಪಿಯುಸಿ ವಿದ್ಯಾರ್ಥಿ ಕರ್ನಾಲ್‌ ಕುರೈ ಎಂಬಾತನನ್ನು ಪೊಲೀಸರು ಸೆರೆಹಿಡಿದಿದ್ದಾರೆ.

ಮೂಲತಃ ಮಂಗಳೂರಿನ ಕಾವೂರು ನಿವಾಸಿಯಾದ 34 ವರ್ಷದ ಶರ್ಮಿಳಾ, ಬೆಂಗಳೂರಿನ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಕಳೆದ ಜನವರಿ 3ರಂದು ಶರ್ಮಿಳಾ ಅವರ ರೂಮ್‌ಮೇಟ್ ಊರಿಗೆ ಹೋಗಿದ್ದ ಕಾರಣ ಅವರು ಮನೆಯಲ್ಲಿ ಒಬ್ಬರೇ ಇದ್ದರು. ಇದನ್ನೇ ಸಂಚಿನ ಭಾಗವಾಗಿಸಿಕೊಂಡ ಆರೋಪಿ ಕರ್ನಾಲ್‌, ಕಿಟಕಿಯ ಮೂಲಕ ಅಕ್ರಮವಾಗಿ ಮನೆಯೊಳಗೆ ನುಗ್ಗಿದ್ದಾನೆ. ಒಂಟಿಯಾಗಿದ್ದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದಾಗ, ಶರ್ಮಿಳಾ ತೀವ್ರವಾಗಿ ಪ್ರತಿರೋಧ ವ್ಯಕ್ತಪಡಿಸಿ ಆತನನ್ನು ಮನೆಯಿಂದ ಹೊರಹೋಗುವಂತೆ ಗದರಿಸಿದ್ದಾರೆ.

ತನ್ನ ವಿಕೃತ ಬಯಕೆಗೆ ತಡೆಯೊಡ್ಡಿದ ಶರ್ಮಿಳಾ ವಿರುದ್ಧ ರೊಚ್ಚಿಗೆದ್ದ ಆರೋಪಿ, ಅವರ ಮೇಲೆ ಪಾಶವೀಯವಾಗಿ ಹಲ್ಲೆ ನಡೆಸಿದ್ದಾನೆ. ಕೈ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗೊಳಿಸಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಕೃತ್ಯದ ಬಳಿಕ ಪೊಲೀಸರ ಕಣ್ಣಿಗೆ ಮಣ್ಣೆರಚಲು ಮತ್ತು ಸಾಕ್ಷ್ಯಗಳನ್ನು ನಾಶಪಡಿಸಲು ಕೊಠಡಿಯಲ್ಲಿದ್ದ ಬಟ್ಟೆಗಳಿಗೆ ಬೆಂಕಿ ಹಚ್ಚಿ, ಶಾರ್ಟ್ ಸರ್ಕ್ಯೂಟ್‌ನಿಂದ ಸಾವು ಸಂಭವಿಸಿದೆ ಎಂದು ಬಿಂಬಿಸಲು ಪ್ರಯತ್ನಿಸಿ ಪರಾರಿಯಾಗಿದ್ದ. ಆರಂಭದಲ್ಲಿ ಬೆಂಕಿಯ ಹೊಗೆಯಿಂದ ಸಾವು ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದರೂ, ಮರಣೋತ್ತರ ಪರೀಕ್ಷೆಯ ವರದಿಯು ಕೊಲೆಯ ಸತ್ಯಾಂಶವನ್ನು ಹೊರಹಾಕಿತು. ರಾಮಮೂರ್ತಿನಗರ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಾಮುಕ ವಿದ್ಯಾರ್ಥಿಯನ್ನು ಜೈಲಿಗಟ್ಟಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ