
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ರಾಜೀನಾಮೆ ನೀಡಿದ್ದು, ಈ ಕುರಿತು ಅವರು ಇಂದು ಮಾಧ್ಯಮಗಳ ಮುಂದೆ ಸ್ಪಷ್ಟನೆ ನೀಡಿದ್ದಾರೆ. ಮಾರ್ಚ್ 18ರಂದೇ ಉಪಸಭಾಪತಿ ಪ್ರಾಣೇಶ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾಗಿ ತಿಳಿದುಬಂದಿದೆ.
“ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ. 2025 ಏಪ್ರಿಲ್ 1ರಿಂದ ಅನ್ವಯವಾಗುವಂತೆ ಸ್ವೀಕರಿಸಿ, ನನ್ನನ್ನು ಈ ಹುದ್ದೆಯಿಂದ ಮುಕ್ತಗೊಳಿಸಬೇಕೆಂದು ವಿನಂತಿಸುತ್ತೇನೆ” ಎಂದು ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ಮನವಿ ಮಾಡಿದ್ದಾರೆ.