
ಕಾರ್ಕಳ: ಬೆಳ್ಮಣ್ ಸಮೀಪದ ಪೆರಳ್‌ಪಾದೆ ಎಂಬಲ್ಲಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ನಿಯಂತ್ರಣ ತಪ್ಪಿ ಪಾದಚಾರಿಗೆ ಢಿಕ್ಕಿಯಾಗಿ ಪಲ್ಟಿಯಾಗಿದ್ದು, ಪರಿಣಾಮ ಪಾದಚಾರಿ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕಾರಿನಲ್ಲಿ ನಿಟ್ಟೆ ವಿದ್ಯಾಸಂಸ್ಥೆಯ ನಾಲ್ವರು ವಿದ್ಯಾರ್ಥಿಗಳು ಮಂಗಳೂರಿನತ್ತ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡಿರುವವರಲ್ಲಿ ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ಮತ್ತು ಉಳಿದ ಇಬ್ಬರನ್ನು ಕಾರ್ಕಳದ ರೋಟರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.




































