spot_img

ಬೆಳ್ಮಣ್ಣ್ ಗ್ರಾಮೀಣ ಕಾಂಗ್ರೆಸ್ ಸಮಿತಿ ಪುನರ್ ರಚನೆಯ ಪೂರ್ವಭಾವಿ ಸಭೆ

Date:

spot_img

ಬೆಳ್ಮಣ್ಣ್ : ಬೆಳ್ಮಣ್ಣ್ ಗ್ರಾಮೀಣ ಕಾಂಗ್ರೇಸ್ ಸಮಿತಿಯನ್ನು ಪುನರ್ ರಚಿಸುವ ಬಗ್ಗೆ ಪಕ್ಷದ ಹಿರಿಯರು ಮತ್ತು ಸರ್ವ ಕಾರ್ಯಕರ್ತರ ಸಭೆಯು ದಿನಾಂಕ 29 ಅದಿತ್ಯವಾರ ಸಂಜೆ 5 ಘಂಟೆಗೆ ಬೆಳ್ಮಣ್ಣ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು, ಬ್ಲಾಕ್ ಅಧ್ಯಕ್ಷರಾದ ಶುಭದರಾವ್, ಪಕ್ಷ‌ ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿದರು.

ಗ್ರಾಮೀಣ ಸಮಿತಿಯ ವಿವಿಧ ಘಟಕಗಳಿಗೆ ನೂತನ ಅಧ್ಯಕ್ಷರುಗಳನ್ನು ಹಾಗೂ 6 ಬೂತ್ ಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ‌ ಮಾಡಿ ಜವಾಬ್ದಾರಿಯನ್ನು‌‌ ನೀಡಿ ಪೂರ್ಣ ಪ್ರಮಾಣದ ಸಮಿತಿ ರಚನೆಯ‌ ನಂತರ ಬೆಳ್ಮಣ್ಣ್ ವಲಯ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸುವ ಬಗ್ಗೆ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕೃಷಿ ಘಟಕದ ಕಾರ್ಯದರ್ಶಿ ಉದಯ್ ಶೆಟ್ಟಿ, ಹಿಂದುಳಿದ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ, ಕಾನೂನು ಘಟಕದ ಅಧ್ಯಕ್ಷ ರೆಹಮ್ಮತ್ತುಲಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು‌ ಭಾಸ್ಕರ್, ಮಹಿಳಾ ಕಾಂಗ್ರೆಸ್ ರಾಜ್ಯ‌ ಕಾರ್ಯದರ್ಶಿ ಅನಿತಾ ಡಿ’ಸೋಜಾ, ಮಾಜಿ ಜಿ.ಪಂ. ಸದಸ್ಯ ಸುಪ್ರೀತ್ ಶೆಟ್ಟಿ, ಸ್ಥಳೀಯ ನಾಯಕ ಉಮೇಶ್ ಶೆಟ್ಟಿ, ಶುಭಕರ್ ನಂದಳಿಕೆ, ಹೇಮಂತ್ ಆಚಾರ್ಯ, ಗ್ರಾ.ಪಂ ಸದಸ್ಯ ಪೌಸ್ಟೀನ್, ಗ್ರಾಮೀಣ ಕಾಂಗ್ರೆಸ್ ಹಿರಿಯ ಕಿರಿಯ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ವಲಯ ಉಸ್ತುವಾರಿ ಕುಶ ಮೂಲ್ಯ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿ, ಅಜಿತ್ ಸೂಡ ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉದ್ಯಮಿ ಕೃಷ್ಣರಾಜ ಹೆಗ್ಡೆ ನಿಧನ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀರೆ A ಒಕ್ಕೂಟದ ವತಿಯಿಂದ ಸಂತಾಪ

ಉದ್ಯಮಿ ಕೃಷ್ಣರಾಜ ಹೆಗ್ಡೆ ನಿಧನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀರೆ A ಒಕ್ಕೂಟದವರು ಸಂತಾಪ ಸೂಚಿಸಿದ್ದಾರೆ.

ಗೃಹ ಮಂತ್ರಿಯಾ ಅಥವಾ ‘ಗ್ರಹಚಾರ’ ಮಂತ್ರಿಯಾ?: ಬಿಜೆಪಿ ನಾಯಕರನ್ನು ತರಾಟೆಗೆತ್ತಿಕೊಂಡ ಮಹೇಶ್ ಶೆಟ್ಟಿ ತಿಮರೋಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಾವು ನೀಡಿದ್ದಾರೆ ಎನ್ನಲಾದ ಹೇಳಿಕೆಗಾಗಿ ಬಂಧನಕ್ಕೆ ಒತ್ತಾಯಿಸಿದ ಬಿಜೆಪಿ ನಾಯಕರು ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿರುದ್ಧ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವಹಿಂದೂ ಪರಿಷದ್ ಉಡುಪಿ ಜಿಲ್ಲೆಯ ವತಿಯಿoದ ಶಿವ ಪಂಚಾಕ್ಷರಿ ಜಪ ಸಂಕಲ್ಪ ; ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಕೊನೆಯಾಗಲು ಪ್ರಾರ್ಥನೆ

ಕ್ಷೇತ್ರದಲ್ಲಿ ಶ್ರದ್ಧೆ , ಭಕ್ತಿ , ಶಾಂತಿ ನೆಲೆಸಲಿ ಎಂಬ ಉದ್ದೇಶದಿಂದ ಉಡುಪಿ ಅನಂತೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶಿವ ಪಂಚಾಕ್ಷರಿ ಜಪ ಸಂಕಲ್ಪವನ್ನು ಪರ್ಯಾಯ ಶ್ರೀ ಪುತ್ತಿಗೆ ಶ್ರೀಗಳ ಸಮ್ಮುಖದಲ್ಲಿ ನಡೆಸಲಾಯಿತು.

ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹಿಸಿದ್ದಾರೆ.