ಬೆಳ್ಮಣ್ಣ್ ಗ್ರಾಮೀಣ ಕಾಂಗ್ರೆಸ್ ಸಮಿತಿ ಪುನರ್ ರಚನೆಯ ಪೂರ್ವಭಾವಿ ಸಭೆ

Date:

spot_img

ಬೆಳ್ಮಣ್ಣ್ : ಬೆಳ್ಮಣ್ಣ್ ಗ್ರಾಮೀಣ ಕಾಂಗ್ರೇಸ್ ಸಮಿತಿಯನ್ನು ಪುನರ್ ರಚಿಸುವ ಬಗ್ಗೆ ಪಕ್ಷದ ಹಿರಿಯರು ಮತ್ತು ಸರ್ವ ಕಾರ್ಯಕರ್ತರ ಸಭೆಯು ದಿನಾಂಕ 29 ಅದಿತ್ಯವಾರ ಸಂಜೆ 5 ಘಂಟೆಗೆ ಬೆಳ್ಮಣ್ಣ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು, ಬ್ಲಾಕ್ ಅಧ್ಯಕ್ಷರಾದ ಶುಭದರಾವ್, ಪಕ್ಷ‌ ಸಂಘಟನೆಯ ಬಗ್ಗೆ ಮಾರ್ಗದರ್ಶನ ನೀಡಿದರು.

ಗ್ರಾಮೀಣ ಸಮಿತಿಯ ವಿವಿಧ ಘಟಕಗಳಿಗೆ ನೂತನ ಅಧ್ಯಕ್ಷರುಗಳನ್ನು ಹಾಗೂ 6 ಬೂತ್ ಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕ‌ ಮಾಡಿ ಜವಾಬ್ದಾರಿಯನ್ನು‌‌ ನೀಡಿ ಪೂರ್ಣ ಪ್ರಮಾಣದ ಸಮಿತಿ ರಚನೆಯ‌ ನಂತರ ಬೆಳ್ಮಣ್ಣ್ ವಲಯ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸುವ ಬಗ್ಗೆ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಕೃಷಿ ಘಟಕದ ಕಾರ್ಯದರ್ಶಿ ಉದಯ್ ಶೆಟ್ಟಿ, ಹಿಂದುಳಿದ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ, ಕಾನೂನು ಘಟಕದ ಅಧ್ಯಕ್ಷ ರೆಹಮ್ಮತ್ತುಲಾ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು‌ ಭಾಸ್ಕರ್, ಮಹಿಳಾ ಕಾಂಗ್ರೆಸ್ ರಾಜ್ಯ‌ ಕಾರ್ಯದರ್ಶಿ ಅನಿತಾ ಡಿ’ಸೋಜಾ, ಮಾಜಿ ಜಿ.ಪಂ. ಸದಸ್ಯ ಸುಪ್ರೀತ್ ಶೆಟ್ಟಿ, ಸ್ಥಳೀಯ ನಾಯಕ ಉಮೇಶ್ ಶೆಟ್ಟಿ, ಶುಭಕರ್ ನಂದಳಿಕೆ, ಹೇಮಂತ್ ಆಚಾರ್ಯ, ಗ್ರಾ.ಪಂ ಸದಸ್ಯ ಪೌಸ್ಟೀನ್, ಗ್ರಾಮೀಣ ಕಾಂಗ್ರೆಸ್ ಹಿರಿಯ ಕಿರಿಯ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

ವಲಯ ಉಸ್ತುವಾರಿ ಕುಶ ಮೂಲ್ಯ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿದರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿ, ಅಜಿತ್ ಸೂಡ ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.