
ಬೆಳ್ಮಣ್ಣು: ಅಕ್ಟೋಬರ್ 5 ರಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ನಿಯಂತ್ರಣ ತಪ್ಪಿದ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಗಾಯಾಳು ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಮೃತರನ್ನು ಝಾರ್ಖಂಡ್ ಮೂಲದ ರಾಜೇಶ್ ಎಂದು ಗುರುತಿಸಲಾಗಿದೆ. ರಾಜೇಶ್ ಅವರು ತಮ್ಮ ಸ್ನೇಹಿತರೊಂದಿಗೆ ನಂದಳಿಕೆಯ ಜೀಸಸ್ ವುಡ್ ಇಂಡಸ್ಟ್ರೀಸ್‌ನಲ್ಲಿ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ರಾತ್ರಿ ವೇಳೆ ಬೆಳ್ಮಣ್ಣು ಪೇಟೆಗೆ ತೆರಳಿ ಹಿಂತಿರುಗುವಾಗ ಈ ದುರ್ಘಟನೆ ಸಂಭವಿಸಿದೆ.
ಈ ಬಗ್ಗೆ ಮೃತರ ಸ್ನೇಹಿತ ರೂಪಾನ್ ಮರಾಂಡಿ ಅವರು ನೀಡಿರುವ ದೂರಿನ ಅನ್ವಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
































