
ಬೆಂಗಳೂರು: ರಾಜಧಾನಿಯ ಶ್ರೀರಾಂಪುರ ಪ್ರದೇಶದಲ್ಲಿ ಹಾಡಹಗಲೇ ವಿದ್ಯಾರ್ಥಿನಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಶ್ರೀರಾಂಪುರ ರೈಲ್ವೆ ಟ್ರ್ಯಾಕ್ ಬಳಿ ದುಷ್ಕರ್ಮಿಗಳು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ದುಷ್ಕರ್ಮಿಗಳು ಆ ವಿದ್ಯಾರ್ಥಿನಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಬಂದು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಶ್ರೀರಾಂಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆಯಾದ ವಿದ್ಯಾರ್ಥಿನಿ ಯಾರು? ಮತ್ತು ಈ ಭೀಕರ ಹತ್ಯೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿ ಗುರುತು ಮತ್ತು ಕೊಲೆ ಹಿಂದಿನ ಉದ್ದೇಶ ಇನ್ನಷ್ಟೇ ತಿಳಿದುಬರಬೇಕಿದೆ.