ಎಂಎಲ್‌ಸಿ ರಾಜೇಂದ್ರರವರ ಕೊಲೆಗೆ ಸುಪಾರಿ? ಐವರು ಆರೋಪಿಗಳ ವಿರುದ್ಧ FIR ದಾಖಲು!

Date:

spot_img

ತುಮಕೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಪುತ್ರ ಎಂಎಲ್‌ಸಿ ರಾಜೇಂದ್ರ ಅವರನ್ನು ಕೊಲ್ಲಲು ‘ಸುಪಾರಿ’ ನೀಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಕುರಿತು ಅವರು ತುಮಕೂರು ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.

ಈ ಪ್ರಕರಣದ ಕುರಿತು ಕ್ಯಾತಸಂದ್ರ ಪೊಲೀಸರು ರೌಡಿ ಶೀಟರ್ ಸೋಮು ಸೇರಿದಂತೆ ಐದು ಜನರ ವಿರುದ್ಧ FIR ದಾಖಲಿಸಿದ್ದಾರೆ. ಭರತ್, ಅಮಿತ್, ಗುಂಡಾ ಮತ್ತು ಯತೀಶ್ ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿದ್ದು, ಅವರನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಆಡಿಯೋ ಟೇಪ್‌ನಲ್ಲಿ ಸುಪಾರಿ ಡೀಲ್?
ರಾಜೇಂದ್ರ ಜನವರಿ 2025ರಲ್ಲಿ ಈ ಸಂಚಿನ ಬಗ್ಗೆ ತಿಳಿದುಕೊಂಡಿದ್ದರು, ಆದರೆ ಅದನ್ನು ತಮಾಷೆ ಎಂದುಕೊಂಡು ದೂರು ದಾಖಲಿಸಲು ವಿಳಂಬ ಮಾಡಿದ್ದರು. “ನಾನು ಜನವರಿಯಲ್ಲಿ ಸುಪಾರಿ ಡೀಲ್ ಕುರಿತ 18 ನಿಮಿಷದ ಆಡಿಯೋ ಸಿಕ್ಕಿತ್ತು. “ನಾನು ಎಸ್‌ಪಿಗೆ ದೂರು ನೀಡಿದ್ದೇನೆ ಮತ್ತು ಅವರೊಂದಿಗೆ ವಿವರವಾಗಿ ಮಾತನಾಡಿದ್ದೇನೆ. ಅವರು (ಆರೋಪಿಗಳು) ನನ್ನ ಕಾರಿನಲ್ಲಿ ಜಿಪಿಎಸ್ ಅಳವಡಿಸಲು ಪ್ರಯತ್ನಿಸಿದ್ದಾರೆ. ಒಟ್ಟು 70 ಲಕ್ಷ ರೂ. ಸುಪಾರಿ ಮೊತ್ತದಲ್ಲಿ 5 ಲಕ್ಷ ರೂ. ಪಾವತಿಸಲಾಗಿದೆ. ಅವರು ಅದನ್ನು ಏಕೆ ನೀಡಿದ್ದಾರೆಂದು ನನಗೆ ತಿಳಿದಿಲ್ಲ.ಸೋಮ ಮತ್ತು ಭರತ್ ಹೆಸರುಗಳು ಆಡಿಯೋದಲ್ಲಿವೆ. ಅವರು ಯಾರೆಂದು ನನಗೆ ತಿಳಿದಿಲ್ಲ ಆದರೆ ಒಬ್ಬ ಮಹಿಳೆ ಮತ್ತು ಹುಡುಗ ಅದರ ಬಗ್ಗೆ ಮಾತನಾಡುತ್ತಿರುವ 18 ನಿಮಿಷಗಳ ಆಡಿಯೋ ಇದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಪೊಲೀಸರ ನಿರ್ಧಾರ ಮತ್ತು ಭದ್ರತಾ ಕ್ರಮ
ಪೊಲೀಸರು FIR ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. “ಈ ಬಗ್ಗೆ ನಮಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ. ಆದರೆ ಈಗ FIR ದಾಖಲಿಸಲಾಗಿದೆ, ಹಾಗೂ ಸಚಿವ ರಾಜಣ್ಣ ಮತ್ತು ಎಂಎಲ್‌ಸಿಗೆ ಬಿಗಿ ಭದ್ರತೆ ಒದಗಿಸಲಾಗುವುದು,” ಎಂದು ಎಸ್‌ಪಿ ಅಶೋಕ್ ಕೆ.ವಿ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ರಾಜಣ್ಣ ಹನಿ-ಟ್ರ್ಯಾಪ್ ಪ್ರಕರಣಕ್ಕೆ ಸಂಬಂಧವಿಲ್ಲ ಎಂದು ರಾಜೇಂದ್ರ ಸ್ಪಷ್ಟಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.