
ಉಡುಪಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪ್ರತಿ ವರ್ಷದಂತೆ ತಾಲೂಕಿನ ಒಂದು ಭಜನಾ ಮಂಡಳಿಗೆ ನೀಡುವ ಸಾಧಕ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 21ರ ತನಕ 27ನೇ ವರ್ಷದ ರಾಜ್ಯಮಟ್ಟದ ಭಜನಾ ಕಮ್ಮಟ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಮಾರೋಪ ಸಮಾರಂಭದಲ್ಲಿ ಉಡುಪಿ ತಾಲೂಕಿನ ಒಂದು ಉತ್ತಮ ಭಜನಾ ಮಂಡಳಿಗೆ ಸಾಧಕ ಪ್ರಶಸ್ತಿಯನ್ನು ಪಡೆಯುವ ಅವಕಾಶವಿದೆ. ಉಡುಪಿ ತಾಲೂಕಿನ ಭಜನಾ ಮಂಡಳಿಗಳ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಿ, ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ, ವಲಯ ಮೇಲ್ವಿಚಾರಕರು, ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಆಯಾ ವಲಯದ ಸಂಯೋಜಕರಿಂದ ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಪಡೆದು, ಭಜನಾ ಮಂಡಳಿಯ ಮಾಹಿತಿಯನ್ನು ಭರ್ತಿ ಮಾಡಿ, ಸೆಪ್ಟೆಂಬರ್ 5ರ ಒಳಗೆ ಸಲ್ಲಿಸಬೇಕೆಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
