spot_img

ಭಾರ್ಗವಿ ಎಲ್‌. ಎಲ್‌. ಬಿ ’ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ ತಪ್ಪದೆ ನೋಡಿ!

Date:

ಮಂಗಳೂರು: ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕಥೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕಥೆ ‘ಭಾರ್ಗವಿ ಎಲ್‌ ಎಲ್‌ ಬಿ ’ಪ್ರೇಕ್ಷಕರಿಗೆ ತಲುಪಿಸುತ್ತಿದೆ. ಈ ಬಹು ನಿರೀಕ್ಷಿತ ಧಾರಾವಾಹಿ ಮಾ.3 ರಿಂದ ಸೋಮವಾರದಿಂದ ಶುಕ್ರವಾರ ರಾತ್ರಿ 8.30ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ.ಈ ಕಥೆ, ಧೈರ್ಯಶಾಲಿ ಹಾಗೂ ಮಧ್ಯಮ ವರ್ಗದ ಯುವತಿ ಭಾರ್ಗವಿ ಮತ್ತು ಅತ್ಯಂತ ಪ್ರಭಾವಶಾಲಿ ಮತ್ತು ಬಲಿಷ್ಠ ವಕೀಲ ಜಯಪ್ರಕಾಶ್ ಪಾಟೀಲ್ ನಡುವಿನ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ ಹೇಳುತ್ತದೆ. ಭಾರ್ಗವಿಯ ಲಾಯರ್ ತಂದೆಯನ್ನು ಕೋರ್ಟಿನಲ್ಲಿ ಹೀನಾಯವಾಗಿ ಅವಮಾನಿಸಿ ತಲೆ ತಗ್ಗಿಸುವ ಹಾಗೆ ಮಾಡಿ ವಕೀಲಿಕೆಯನ್ನೇ ತ್ಯಜಿಸುವಂತೆ ಮಾಡಿದವನು ಜೆ.ಪಿ. ಪಾಟೀಲ್. ತನ್ನ ವೃತ್ತಿಜೀವನದಲ್ಲಿ ಒಂದೇ ಒಂದು ಸೋಲು ಕಾಣದ, ಗೆಲ್ಲಲು ಯಾವುದೇ ಕಾನೂನನ್ನು ಮುರಿಯುವ ಅವನಿಗೆ ವಕೀಲಿಕೆ ಎಂದರೆ ಅಧಿಕಾರ, ಇಂಥ ಸನ್ನಿವೇಶದಲ್ಲಿ ತನ್ನ ತಂದೆಯ ಗೌರವವನ್ನು ಮರಳಿ ಗಳಿಸಲು ಮತ್ತು ಅನ್ಯಾಯದ ವಿರುದ್ಧ ಹೋರಾಡಿ ಗೆಲ್ಲಲು ಭಾರ್ಗವಿ ಯಶಸ್ವಿಯಾಗುತ್ತಾಳಾ ಎನ್ನುವುದು ‘ಭಾರ್ಗವಿ ಎಲ್‌. ಎಲ್‌. ಬಿ’ಯ ಮುಖ್ಯ ಕಥಾಹಂದರವಾಗಿದೆ. ‘ಭಾರ್ಗವಿ ಎಲ್‌. ಎಲ್‌. ಬಿ ’ -ಸಾಮಾಜಿಕ ಸಂಘರ್ಷ ಮತ್ತು ಕೌಟುಂಬಿಕ ಕಥನ ಹೊಂದಿರುವ ಅತ್ಯಂತ ಶಕ್ತಿಶಾಲಿಯಾಗಿ ನಿರೂಪಿತವಾಗಿರುವ ಎಲ್ಲರೂ ನೋಡಲೇಬೇಕಾದ ಧಾರಾವಾಹಿಯಾಗಿದೆ. ದಿಟ್ಟ ಭಾರ್ಗವಿ ಪಾತ್ರದಲ್ಲಿ ರಾಧಾ ಭಗವತಿ, ಅರ್ಜುನ್ ಪಾಟೀಲ್ ಪಾತ್ರದಲ್ಲಿ ಮನೋಜ್ ಕುಮಾರ್ ಕನ್ನಡ ಟೆಲಿವಿಶನ್ ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೆಪಿ ಪಾಟೀಲ್ ಪಾತ್ರದಲ್ಲಿ ರಂಗಭೂಮಿಯ ಪ್ರಸಿದ್ಧ ಕಲಾವಿದ ಕೀರ್ತಿ ಭಾನು, ಹಾಗೂ ಕನ್ನಡದ ಖ್ಯಾತ ಕಲಾವಿದರಾದ ಅರುಣಾ ಬಾಲರಾಜ್, ಹನುಮಂತೇ ಗೌಡ, ಸುಜಾತಾ ಅಕ್ಷಯ, ‘ಮಾಯಾಬಜಾರ್’ ಖಾತಿಯ ಚೈತ್ರಾ ರಾವ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ‘ಅಂತರಪಟ’ ಧಾರಾವಾಹಿ ಮೂಲಕ ಶಕ್ತಿಶಾಲಿ ಮಹಿಳಾ ಪಾತ್ರ ಗಳನ್ನು ತೆರೆಗೆ ತಂದವರು ನಿರ್ಮಾಪಕಿ ಸ್ವಪ್ನ ಕೃಷ್ಣ, ‘ಭಾರ್ಗವಿ ಎಲ್‌. ಎಲ್‌. ಬಿ ’ ಮೂಲಕ ಮತ್ತೊಂದು ಮಹಿಳಾ ಪ್ರಧಾನ ಧಾರಾವಾಹಿಯನ್ನು ಮುಂದಿಡುತ್ತಿದ್ದಾರೆ “ಮುಂಗಾರು ಮಳೆ” ಕೃಷ್ಣ ಈ ಶೋಗೆ ಕ್ರಿಯೇಟಿವ್ ಹೆಡ್ ಆಗಿದ್ದಾರೆ. ಸಂಗೀತ ರಚನೆ ಮತ್ತು ಗಾಯನ ಶಶಾಂಕ್ ಶೇಷಗಿರಿ ಅವರದು, ಹಾಗೂ ಪ್ರಮೋದ ಮರವಂತೆ ಮನಸಿಗೆ ಮುಟ್ಟುವಂತಹ ಸಾಹಿತ್ಯ ರಚಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.