
ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ ಎದುರು ಹಾಡುಹಗಲೇ ದುಷ್ಕರ್ಮಿಗಳು ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ಗುಂಡು ಹಾರಿಸಿ, ಹಣದ ಚೀಲದೊಂದಿಗೆ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಒಬ್ಬ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಘಟನೆಯ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಶೋಧ ಕಾರ್ಯ ಆರಂಭಿಸಿದ್ದಾರೆ.