ಮಣಿಪಾಲ ಸಮೀಪ ಬೈಕ್ ಸ್ಕಿಡ್: ಗಂಭೀರ ಗಾಯಗೊಂಡ ಸಹ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು

Date:

spot_img

ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಸಮೀಪದ ಹಿರೇಬೆಟ್ಟು ಗ್ರಾಮದ ಅಂಗಡಿಬೆಟ್ಟು ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಜೂನ್ 26 ರಂದು ಸಂಜೆ 5:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಮೃತ ವ್ಯಕ್ತಿಯನ್ನು ಬೊಮ್ಮು ಜಾನು ಬೊಡೇಕರ್ ಎಂದು ಗುರುತಿಸಲಾಗಿದೆ.

ಪೊಲೀಸ್ ವರದಿಯಂತೆ, KA31ED4451 ನಂಬರ್‌ನ ಮೋಟಾರ್ ಸೈಕಲ್‌ ಮಣಿಪಾಲದಿಂದ ಹಿರೇಬೆಟ್ಟು ಕಡೆಗೆ ಅತೀ ವೇಗದಲ್ಲಿ ಸಾಗುತ್ತಿದ್ದು, ಹೋಲೋ ಬ್ಲಾಕ್ ಪ್ಯಾಕ್ಟರಿಯ ಬಳಿ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದೆ. ಬೈಕ್‌ನಲ್ಲಿ ಇಬ್ಬರು ಸವಾರರಿದ್ದರು. ಹಿಂದಿನ ಆಸನದಲ್ಲಿ ಪ್ರಯಾಣಿಸುತ್ತಿದ್ದ ಬೊಮ್ಮು ಜಾನು ಬೊಡೇಕರ್ ಡಾಮರ್ ರಸ್ತೆಯ ಮೇಲೆ ಬಿದ್ದು ಗಾಯಗೊಂಡರು ಮತ್ತೊಬ್ಬ ಸವಾರನು ಮಣ್ಣಿನ ರಸ್ತೆಯಲ್ಲಿ ಬಿದ್ದು ಸ್ವಲ್ಪ ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ಜಾನು ಬೊಡೇಕರ್ ರವರನ್ನು ಸ್ಥಳೀಯರ ಸಹಾಯದಿಂದ ತಕ್ಷಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಜೂನ್ 27ರಂದು ಬೆಳಿಗ್ಗೆ 10:40ಕ್ಕೆ ಮೃತಪಟ್ಟರು.

ಪರಿಣಾಮವಾಗಿ ಮಣಿಪಾಲ ಠಾಣೆಯಲ್ಲಿ ಅಪರಾಧ ಕ್ರಮಾಂಕ 110/2025, ಭಾರತೀಯ ದಂಡಸಂಹಿತೆ ನೂತನ ಕಲಂ 281 ಮತ್ತು 106 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ