ಅತಿಯಾದ ಗಾಳಿ ಮಳೆಯಿಂದ ಆದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಬಿಜೆಪಿ ಕ್ಷೇತ್ರಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

Date:

spot_img
naveen nayak11

ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ನಿನ್ನೆ ದಿನಾಂಕ 18-08-2025 ರಂದು ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ ಮನೆಗಳಿಗೆ ಹಾನಿಯಾಗಿದ್ದು, ಜೊತೆಗೆ ಬೆಳೆ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿರುತ್ತದೆ.

ಕಾರ್ಕಳ ತಾಲೂಕಿನ ಬೆಳ್ಮಣ್‌, ಸೂಡ, ನಂದಳಿಕೆ, ರೆಂಜಾಳ, ಬೈಲೂರು ಹಾಗೂ ಯರ್ಲಪಾಡಿ ಗ್ರಾಮಗಳ ಪರಿಸರದಲ್ಲಿ ಮತ್ತು ಹೆಬ್ರಿ ತಾಲೂಕಿನ ಚಾರ ಕುಚ್ಚೂರು ಮತ್ತು ಮುದ್ರಾಡಿ ಗ್ರಾಮಗಳ ಪರಿಸರದಲ್ಲಿ ನಿನ್ನೆಯ ಸಂಜೆಯ ಹೊತ್ತಿಗೆ ಒಮ್ಮೆಲೆ ಬಂದ ಸುಂಟರಗಾಳಿ ಹಾಗೂ ಅತಿಯಾದ ಮಳೆ ಗಾಳಿಯಿಂದ ಆ ಪ್ರದೇಶದ ಹಲವು ಕಡೆಗಳಲ್ಲಿ ವಾಸದ ಮನೆಗಳು , ಕೃಷಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಉಂಟಾಗಿದ್ದು, ತುರ್ತು ಪರಿಹಾರೋಪಾಯಗಳನ್ನು ಒದಗಿಸುವುದು ತುಂಬಾ ಅವಶ್ಯಕವಾಗಿರುತ್ತದೆ. ಇದರ ಜೊತೆಗೆ ಕಳೆದು 3 ತಿಂಗಳುಗಳಿಂದ ನಿರಂತರ ಮಳೆಯಿಂದಾಗಿ ಕೆಲವು ಕಡೆ ಕ್ಷೇತ್ರದ ರಸ್ತೆಗಳು ತೀರ ಹದಗೆಟ್ಟಿದ್ದು ಇದರ ದುರಸ್ತಿಯು ಅತ್ಯಂತ ಅವಶ್ಯಕವಾಗಿದೆ.

ಪ್ರಾಕೃತಿಕ ವಿಕೋಪದಿಂದ ಪ್ರಮುಖವಾಗಿ ವಾಸದ ಮನೆಗಳಿಗೆ ಆಗಿರುವ ಹಾನಿಗೆ ಸಂಬಂಧಿಸಿದಂತೆ ತಾಲೂಕು ಆಡಳಿತ ಹಾನಿಯ ಕುರಿತು ಅಂದಾಜು ವೆಚ್ಚದ ಮಾಹಿತಿಯನ್ನು ಕ್ರೂಢಿಕರಿಸಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ಹಾಗೂ ಸರಕಾರ ಕೂಡಲೇ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಅನುದಾನ ಬಿಡುಗಡೆ ಮಾಡಬೇಕೆಂದು ಬಿಜೆಪಿ ಕಾರ್ಕಳದ ಕ್ಷೇತ್ರಾಧ್ಯಕ್ಷರಾದ ನವೀನ್‌ ನಾಯಕ್‌ ಆಗ್ರಹಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.