spot_img

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ‘ವಿಶ್ವ ಮಹಿಳಾ ದಿನಾಚರಣೆ’, ಮಹಿಳೆಯರಿಗಾಗಿ ‘ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ’

Date:

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಎನ್.ಸಿ.ಡಿ. ವಿಭಾಗ, ಜಿಲ್ಲಾ ಸರ್ವೇಕ್ಷಣಾ ಘಟಕ ಉಡುಪಿ, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಮ್.ಸಿ. ದಂತ ವೈದ್ಯಕೀಯ ವಿಭಾಗ ಮಣಿಪಾಲ ಹಾಗೂ ಅಪ್ಪು ಅಭಿಮಾನಿಗಳ ಬಳಗ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಹಿಳೆಯರಿಗಾಗಿ ‘ಉಚಿತ ಆರೋಗ್ಯ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಬಿರ’ವು ಮಾರ್ಚ್.8 ಶನಿವಾರ ಬೆಳಿಗ್ಗೆ ಗಂಟೆ 9.00ರಿಂದ ಮಧ್ಯಾಹ್ನ ಗಂಟೆ 12.30ರ ವರೆಗೆ ಉಡುಪಿ ಕುಂಜಿಬೆಟ್ಟುವಿನಲ್ಲಿರುವ ಬಿಜೆಪಿ ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ತಿಳಿಸಿದ್ದಾರೆ.

ಈ ಉಚಿತ ‘ಆರೋಗ್ಯ ತಪಾಸಣಾ ಶಿಬಿರ’ದಲ್ಲಿ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ತಪಾಸಣೆಯ ಸಹಿತ ಗರ್ಭಕೋಶದ ಕ್ಯಾನ್ಸರ್, ಬ್ರೆಸ್ಟ್ ಕ್ಯಾನ್ಸರ್, ಮೂಳೆ ಸಾಂದ್ರತೆ, ಜನರಲ್ ಮೆಡಿಸಿನ್, ಸ್ಕಿನ್, ಇ.ಎನ್.ಟಿ, ಕಣ್ಣು ಹಾಗೂ ಹಲ್ಲಿನ ತಪಾಸಣೆಯ ಸೇವೆಗಳು ಲಭ್ಯವಿದೆ.

ವಿಶೇಷವಾಗಿ ಅಂಗಾಗ ದಾನದ ಕುರಿತು ಮಾಹಿತಿ ಹಾಗೂ ನೊಂದಾವಣೆ ನಡೆಯಲಿದೆ.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಧ್ಯಾ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.