
ಉಡುಪಿ : ಕಳೆದ ಸುಮಾರು 30 ವರ್ಷಗಳಿಂದ ಉಡುಪಿಯ ವಿವಿಧ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕಂಠ ಪಾಠವನ್ನು ಕಲಿಸಿ, ತನ್ನ ಸ್ವಂತ ಖರ್ಚಿನಿಂದ ವಿದ್ಯಾರ್ಥಿಗಳಿಗೆ ಉಚಿತ ಭಗವದ್ಗೀತೆ ಪುಸ್ತಕವನ್ನು ವಿತರಿಸುತ್ತಾ ಬಂದಿರುವ ಮೀನಾಕ್ಷಿ ಪೈ ಅವರನ್ನು ಶ್ರೀ ಗುರು ಪೂರ್ಣಿಮಾ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಉಡುಪಿ ನಗರಾಧ್ಯಕ್ಷ ಶ್ರೀವತ್ಸ ಅವರ ನೇತೃತ್ವದಲ್ಲಿ ಗೌರವಿಸಿ ಗುರು ವಂದನೆ ಸಲ್ಲಿಸಲಾಯಿತು.
ಮೀನಾಕ್ಷಿ ಪೈ ಅವರು ಉಡುಪಿ ಶ್ರೀ ಕೃಷ್ಣ ಮಠದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಶ್ಲೋಕಗಳ ಕಂಠ ಪಾಠ ಸ್ಪರ್ಧೆಗಳನ್ನು ಏರ್ಪಡಿಸಿ ವಿದ್ಯಾರ್ಥಿ ಸಮುದಾಯ ಭಗವದ್ಗೀತೆ ಕಲಿಯಲು ಪ್ರೋತ್ಸಾಹವನ್ನು ನೀಡುತ್ತಾ ಬಂದಿರುತ್ತಾರೆ. ಕಳೆದ 15 ವರ್ಷಗಳಿಂದ ಶ್ರೀ ಕೃಷ್ಣ ಮಠದಲ್ಲಿ ಪ್ರತೀ ದಿನ ಭಗವದ್ಗೀತೆ ಶ್ಲೋಕ ಪಠಿಣ ಸೇವೆಯನ್ನು ನಡೆಸುತ್ತಾ ಬಂದಿರುತ್ತಾರೆ.
ಈ ಸಂದರ್ಭದಲ್ಲಿ ನಗರ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಜ್ವಲ್ ಪೂಜಾರಿ, ಸಂದರ್ಶ ಆಚಾರ್ಯ, ಪ್ರಣವ್ ಕಾಮತ್, ನಗರ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ನಿತಿನ್ ಪೈ ಮಣಿಪಾಲ, ಕಾರ್ಯದರ್ಶಿಗಳಾದ ದೀಕ್ಷಿತ್ ಶೆಟ್ಟಿ, ನಿಖಿಲ್ ಮಡಿವಾಳ, ಹರ್ಷ ಆಚಾರ್ಯ, ಭೂಷಣ್ ಕುಮಾರ್ ಉಪಸ್ಥಿತರಿದ್ದರು.