spot_img

ಬಿಜೆಪಿ ಟಿಕೆಟ್ ವಂಚನೆ: ಚೈತ್ರಾ ಕುಂದಾಪುರ ವಿರುದ್ಧದ ಪ್ರಕರಣಕ್ಕೆ ಮರುಜೀವ, ಹಣ ಬಿಡುಗಡೆಗೆ ಉದ್ಯಮಿ ಹೈಕೋರ್ಟ್ ಮೊರೆ

Date:

spot_img

ಬೆಂಗಳೂರು : ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹5 ಕೋಟಿ ವಂಚಿಸಿದ ಆರೋಪದ ಮೇಲೆ ಚೈತ್ರಾ ಕುಂದಾಪುರ, ಅಭಿನವಶ್ರೀ ಹಾಲವೀರಪ್ಪಜ್ಜ ಮತ್ತಿತರರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಹಣವನ್ನು ತಮಗೆ ಮರಳಿಸುವಂತೆ ದೂರುದಾರ ಉದ್ಯಮಿ ಗೋವಿಂದಬಾಬು ಪೂಜಾರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಚಂದ್ರಮೌಳಿ, “ನಮ್ಮ ಹಣ ಬಿಡುಗಡೆ ಕೋರಿದ್ದ ಅರ್ಜಿ ವಜಾಗೊಂಡಿದೆ. ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಹಣ ಪಡೆದಿದ್ದರು. ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ ಮಾಜಿ ಸ್ಪರ್ಧಿ. ಒಂಥರಾ ಸೆಲೆಬ್ರಿಟಿ. ಪೊಲೀಸರು ವಶಕ್ಕೆ ಪಡೆದಿರುವ ಹಣ ನಮಗೆ ಮರಳಿಸಬೇಕು” ಎಂದು ವಾದಿಸಿದರು.

ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ. ಮುಂದಿನ ವಿಚಾರಣೆಯಲ್ಲಿ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಈ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು, ಈಗ ಮತ್ತೆ ನ್ಯಾಯಾಲಯದ ಹಂತದಲ್ಲಿ ವಿಚಾರಣೆಗೆ ಬಂದಿರುವುದು ಕುತೂಹಲ ಮೂಡಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಾಳೆ ಕಲಂಬಾಡಿಯಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಜನನಿ ಮಿತ್ರ ಮಂಡಳಿ (ರಿ) ವಾoಟ್ರಾಯ್ ಪದವು, ರೋಟರಿ ಕ್ಲಬ್ ಕಾರ್ಕಳ, ಜೆಸಿಐ ಕಾರ್ಕಳ ಹಳೆ ವಿದ್ಯಾರ್ಥಿ ಸಂಘ, ಕಲಂಬಾಡಿ ಪದವು ಮತ್ತು ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ

ಶಿರೂರು ಮಠದ ಭಾವಿ ಪರ್ಯಾಯ ಶ್ರೀ ವೇದವರ್ಧನ ತೀರ್ಥರಿಗೆ ಬ್ರಾಹ್ಮಣ ಮಹಾಸಭಾದಿಂದ ಫಲ ಕಾಣಿಕೆ ಅರ್ಪಣೆ

ಶಿರೂರು ಮಠದ ಭಾವಿ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ, ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಗೌರವಪೂರ್ವಕವಾಗಿ ಫಲ ಕಾಣಿಕೆ ಅರ್ಪಿಸಿ ಅವರಿಂದ ಆಶೀರ್ವಾದ ಪಡೆಯಲಾಯಿತು.

75 ವಿಐಪಿಗಳನ್ನು ಬ್ಲ್ಯಾಕ್‌ಮೇಲ್ ಮಾಡಿದ ‘ಹನಿ ಮನಿ’ ಲೇಡಿ: ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಟಿಸಿದ ‘ಚಿತ್ರಾಂಗಿಣಿ’!

ಮಹಾರಾಷ್ಟ್ರದಲ್ಲಿ 75ಕ್ಕೂ ಹೆಚ್ಚು ವಿಐಪಿಗಳನ್ನು ಹನಿಟ್ರ್ಯಾಪ್ ಮಾಡಿ ಕೋಟ್ಯಂತರ ರೂ. ಸುಲಿಗೆ ಮಾಡಿದ ಮಹಿಳೆಯ ಪ್ರಕರಣ ಭಾರೀ ಕೋಲಾಹಲ ಸೃಷ್ಟಿಸಿದೆ.

ಡಿಸಿಎಂ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ; ಇಬ್ಬರಿಗೆ ಗಾಯ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಶನಿವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಪಲ್ಟಿಯಾಗಿ ಅದರಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.