
ಬೆಂಗಳೂರು: ಸರ್ಕಾರದ ಬೆಲೆ ಏರಿಕೆ ಕ್ರಮವನ್ನು ಖಂಡಿಸಿ, ಬಿಜೆಪಿ (BJP) ರಾಜ್ಯಾದ್ಯಾಂತ ಸರಣಿ ಪ್ರತಿಭಟನೆ ಮತ್ತು ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಇಂದು ಬುಧವಾರ, ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ 11 ಗಂಟೆಯಿಂದ ಬೆಂಗಳೂರು ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ಆರಂಭವಾಗಲಿದೆ.
ಈ ಧರಣಿಯಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಮತ್ತು ಪದಾಧಿಕಾರಿಗಳು ಭಾಗವಹಿಸುವರು. ಜೊತೆಗೆ, ಶಾಸಕರ ಅಮಾನತು ಕ್ರಮವನ್ನು ಖಂಡಿಸಿ, ಇಂದಿನ ದಿನವೇ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಬಿಜೆಪಿ ಮತ್ತೊಂದು ಪ್ರತಿಭಟನೆ ನಡೆಸಲಿದೆ.