
ಉಡುಪಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ, ನಿವೃತ್ತ ಶಿಕ್ಷಕರು, ಸರಳ ಸಜ್ಜನಿಕೆಯ ಆದರ್ಶ ವ್ಯಕ್ತಿತ್ವದ ಹಿರಿಯರು, ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರ ತೀರ್ಥರೂಪರಾದ ಎಂ.ಕೆ. ವಾಸುದೇವ (87 ವರ್ಷ) ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಪುತ್ರ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.