ಕಾರ್ಕಳದಲ್ಲಿ ಪ್ರಧಾನಿ ಮೋದಿ 75ನೇ ಜನುಮದಿನದ ಪ್ರಯುಕ್ತ ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

Date:

spot_img

ಕಾರ್ಕಳ : ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ಯುವಮೋರ್ಚಾ ಕಾರ್ಕಳ ಹಾಗೂ ರಕ್ತ ನಿಧಿ ಕೇಂದ್ರ ಜಿಲ್ಲಾಸ್ಪತ್ರೆ ಉಡುಪಿ ವತಿಯಿಂದ ರಾಷ್ಟ್ರ ಕಂಡ ಶ್ರೇಷ್ಠ ಪ್ರಧಾನಿ ನರೇಂದ್ರ ಮೋದಿಜೀಯವರ 75ನೇ ಜನುಮದಿನದ ಆಚರಣೆಯ ಸೇವಾ ಪಾಕ್ಷಿಕದ ಸಲುವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಶಾಸಕರ ಕಛೇರಿ ವಿಕಾಸದಲ್ಲಿ ನಡೆಯಿತು.

ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಇವರು ದೀಪ ಪ್ರಜ್ವಲನೆ ಮೂಲಕ ಶಿಬಿರವನ್ನು ಉದ್ಘಾಟಿಸಿದರು.

ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿಯ ವೈದ್ಯಾಧಿಕಾರಿಗಳಾದ ಡಾ. ವೀಣಾಕುಮಾರಿಯವರು ಮಾತನಾಡಿ ರಕ್ತದಾನ ಶ್ರೇಷ್ಠದಾನ, ಇದು ಕೇವಲ ಸೇವೆಯಲ್ಲ, ಒಂದು ಮಹಾ ಮಾನವೀಯ ಕರ್ಮ, ರಕ್ತದಾನ ಮಾಡಿದರೆ ದೇಹದಲ್ಲಿ ಹಳೆಯ ರಕ್ತಕಣಗಳು ಹೋಗಿ, ಹೊಸ ರಕ್ತಕಣಗಳು ಉತ್ಪತ್ತಿಯಾಗುವುದರಿಂದ ದೇಹವೂ ತಾಜಾಗುತ್ತದೆ ಎಂದರು.

ರವೀಂದ್ರ ಕುಮಾರ್ ಅವರು ಮಾತನಾಡಿ ನರೇಂದ್ರ ಮೋದಿಯವರು ಈ ದೇಶದ ಮಹಾನ್ ಶಕ್ತಿ ಅವರ ಜನುಮದಿನದ ಶುಭಸಂದರ್ಭದಲ್ಲಿ ಯುವಮೋರ್ಚಾ ತಂಡವು ರಕ್ತದಾನ ಶಿಬಿರ ಆಯೋಜಿಸಿದ್ದು ಅತ್ಯಂತ ಶ್ಲಾಘನೀಯ ಎಂದರು.

ಶಿಬಿರದಲ್ಲಿ ಬಿಜೆಪಿಯ ಕ್ಷೇತ್ರಾಧ್ಯಕ್ಷರಾದ ಶ್ರೀ ನವೀನ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯರಾಮ್ ಸಾಲ್ಯಾನ್, ತಾಲೂಕು ಉಪಾಧ್ಯಕ್ಷರಾದ ಬೋಳ ಸತೀಶ್ ಪೂಜಾರಿ, ಯುವಮೋರ್ಚಾ ಕರ್ನಾಟಕದ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ತಾಲೂಕು ಕಾರ್ಯದರ್ಶಿ ಸುಮಿತ್ ಶೆಟ್ಟಿ ಕೌಡೂರು, ಜಿಲ್ಲಾ ಯುವಮೋರ್ಚಾ ಖಜಾಂಜಿ ಗುರುರಾಜ್ ಮಾಡ, ತಾಲೂಕು ಯುವಮೋರ್ಚ ಅಧ್ಯಕ್ಷರು ರಾಕೇಶ್ ಶೆಟ್ಟಿ ಕುಕ್ಕುಂದೂರು, ಯುವಮೋರ್ಚ ಪ್ರಧಾನ ಕಾರ್ಯದರ್ಶಿಯವರಾದ ಧನುಷ್ ಆಚಾರ್ಯ ಅತ್ತೂರು, ರಜತ್ ರಾಮ್ ಮೋಹನ್ ಮುಡಾರು, ಯುವಮೋರ್ಚ ಕಾರ್ಯಕರ್ತರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.