
ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ ಸಭೆಯ 12:06:2025 ಸೋಮವಾರ ಬೆಳ್ಳಿಗ್ಗೆ 10:30 ಕ್ಕೆ ಕಾರ್ಕಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.
ಈ ಸಭೆಯಲ್ಲಿ ಗಡಿಯಲ್ಲಿ ಹೋರಾಡುತ್ತಿರುವ ಸೈನ್ಯಕ್ಕೆ ಅತ್ಮಸ್ಥೈರ್ಯ ತುಂಬುವ ಕಾರ್ಯಕ್ರಮಗಳು, ಹೆಬ್ರಿಯಲ್ಲಿ ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುತ್ತಳಿ ನಿರ್ಮಾಣ, ಪಕ್ಷ ಸಂಘಟನೆಗೆ ಅನುಕೂಲವಾಗುವ ಕಾರ್ಯಕ್ರಮಗಳು, ಕ್ಷೇತ್ರದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ಮತ್ತು ಪ್ರಸ್ತುತ ಪ್ರಚಲಿತ ಪ್ರಮುಖ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.