
ಉಡುಪಿ ನಗರ ಠಾಣಾ ವ್ಯಾಪ್ತಿಯ ಶಾರದಾ ವಸತಿ ಶಾಲೆಗೆ ಅನಾಮಧೇಯ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಸಂದೇಶವನ್ನು ಇಮೇಲ್ ಮೂಲಕ ಕಳುಹಿಸಿದ್ದಾನೆ. ಈ ಘಟನೆ ಕುರಿತು ಶಾಲೆಯ ಪ್ರಾಂಶುಪಾಲರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದು, ತಕ್ಷಣವೇ ಬಿಡಿಡಿಎಸ್ ತಂಡದಿಂದ ಪರಿಶೀಲನೆ ನಡೆಸಲಾಗಿದೆ. ಆದರೆ, ಪರಿಶೀಲನೆಯ ವೇಳೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ. ಮೇಲ್ನೋಟಕ್ಕೆ ಇದು ಹುಸಿ ಬಾಂಬ್ ಬೆದರಿಕೆ ಎಂದು ಎಸ್ಪಿ ಡಾ. ಅರುಣ್ ತಿಳಿಸಿದ್ದಾರೆ.
ಹುಸಿ ಬಾಂಬ್ ಬೆದರಿಕೆಯ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ಆರಂಭವಾಗಿದೆ. ಇಮೇಲ್ ಸಂದೇಶ ಕಳುಹಿಸಿದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.