

ಬೊಮ್ಮರಬೆಟ್ಟು ಶ್ರೀ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ತಾ 11.02.2025 ಮಂಗಳವಾರದಿಂದ ತಾ13.02.2025 ನೇ ಗುರುವಾರದವರೆ ಗೆ ವಾರ್ಷಿಕ ನೇಮೋತ್ಸವವು ನಡೆಯಲಿರುವುದು . ತಾ 12.02.2025 ನೇ ಬುಧವಾರ ನಡೆಯುವ ಮಹಾಪೂಜೆ ಹಾಗೂ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ , ಸಾರ್ವಜನಿಕ ಅನ್ನಸಂತರ್ಪಣೆ ,ಶ್ರೀ ಮಹಾಮಾಯಿ ದರ್ಶನ, ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಬ್ರಹ್ಮ ಬೈದರ್ಕಳ ದರ್ಶನ ,ಶ್ರೀ ಜೋಗಿ ಪುರುಷ ಕೋಲದೊಂದಿಗೆ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಅತೀ ವಿಜ್ರಂಭಣೆಯಿಂದ ನಡೆಯಲಿವೆ.
ಭಕ್ತಾಭಿಮಾನಿಗಳಾದ ತಾವೆಲ್ಲರೂ ಆಗಮಿಸಿ ತನು ಮನ ಧನಗಳಿಂದ ಸಹಕರಿಸಿ, ಶ್ರೀ ದೇವರ ಸಿರಿಮುಡಿ ಗಂಧಪ್ರಸಾದವನ್ನು ಸ್ವೀಕರಿಸಿ, ಶ್ರೀ ಕ್ಷೇತ್ರದ ಶ್ರೀ ಕೊಡಮಣಿತ್ತಾಯ, ಶ್ರೀ ಬ್ರಹ್ಮಬೈದರ್ಕಳ ಹಾಗೂ ಪರಿವಾರ ದೈವಗಳ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.