
ಬೊಮ್ಮರಬೆಟ್ಟು : ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ಡಾಂನಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹18 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇಂದು ಅದಕ್ಕೆ ವಿಧ್ಯುಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಶುಭ ಸಮಾರಂಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್ ,ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಗ್ರಾಮ ಪಂಚಾಯತ್‌ನ ಇತರ ಸದಸ್ಯರು, ಮತ್ತು ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಈ ಹೊಸ ಅಂಗನವಾಡಿ ಕಟ್ಟಡವು ಪಡ್ಡಾಂ ಸುತ್ತಮುತ್ತಲಿನ ಮಕ್ಕಳಿಗೆ ಉತ್ತಮ ಮೂಲಸೌಕರ್ಯಗಳನ್ನು ಒದಗಿಸಲಿದೆ ಎಂದು ನಿರೀಕ್ಷಿಸಲಾಗಿದೆ.