ಮದುವೆ ಇಷ್ಟವಿಲ್ಲವೆಂದು ವರನನ್ನು ಕೊಲ್ಲಲು ₹1.5 ಲಕ್ಷ ಸುಪಾರಿ ಕೊಟ್ಟ ವಧು !

Date:

spot_img

ಪುಣೆ: ಮದುವೆ ಇಷ್ಟವಿಲ್ಲದ ಕಾರಣದಿಂದಾಗಿ ವರನನ್ನು ಕೊಲ್ಲಲು ಯುವತಿಯೋರ್ವಳು ಸುಪಾರಿ ನೀಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಬೆಳಕಿಗೆ ಬಂದಿದೆ.ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆರೋಪಿ ಯುವತಿ ಇದೀಗ ತಲೆಮರೆಸಿಕೊಂಡಿದ್ದಾಳೆ.

ಅಹಲ್ಯಾನಗರದ ಮಯೂರಿ ಸುನಿಲ್ ದಾಂಗ್ಡೆ ಎಂಬವಳಿಗೆ ಜಲಗಾಂವ್‌ನ ಸಾಗರ್ ಜಯಸಿಂಗ್ ಕದಮ್ ಎಂಬವರೊಂದಿಗೆ ನಿಶ್ಚಿತಾರ್ಥವಾಗಿದೆ. ಫೋಟೋಶೂಟ್ ಮುಗಿದ ನಂತರ ಮದುವೆಗೆ ಹಿಂದೇಟು ಹಾಕಿದ ಮಯೂರಿ, ಸಾಗರ್‌ನನ್ನು ಕೊಲ್ಲಲು ತನ್ನ ಪರಿಚಿತ ಸಂದೀಪ್ ಗಾವ್ಡೆ ಮೂಲಕ ₹1.5 ಲಕ್ಷ ಸುಪಾರಿ ನೀಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಫೆಬ್ರವರಿ 27ರಂದು, ಜಲಗಾಂವ್‌ನ ಹೋಟೆಲ್ ಬಳಿ ಸಾಗರ್ ಮೇಲೆ ಹಲ್ಲೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಸಾಗರ್ ಆಸ್ಪತ್ರೆಗೆ ದಾಖಲಾಗಿದ್ದು, ಕಾಲು ಮುರಿದಿದೆ ಮತ್ತು ತಲೆ-ಬೆನ್ನಿಗೆ ಗಾಯವಾಗಿದೆ. ಘಟನೆ ಸಂಬಂಧಿಸಿದಂತೆ ಯಾವತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೀವ್ರ ತನಿಖೆಯ ನಂತರ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮಯೂರಿಯ ವಿರುದ್ಧ IPC ಸೆಕ್ಷನ್ 109, 61(2), 126(2) ಅಡಿಯಲ್ಲಿ ಆರೋಪ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.