ಬೆಂಗಳೂರಿನಲ್ಲಿ ಭೀಕರ ಹತ್ಯೆ! ಪತ್ನಿಯ ಮೃತದೇಹವನ್ನು ತುಂಡರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿದ ಪತಿ!

Date:

spot_img

ಬೆಂಗಳೂರು, (ಮಾರ್ಚ್.28): ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ರಾಕೇಶ್ ಎಂಬಾತ ತನ್ನ ಪತ್ನಿ ಗೌರಿ ಅನಿಲ್ ಸಾಂಬೆಕರ್ (32) ಅವರನ್ನು ಹತ್ಯೆ ಮಾಡಿ, ಮೃತದೇಹವನ್ನು ತುಂಡರಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿ ಮನೆಯಿಂದ ಪರಾರಿಯಾಗಿದ್ದಾನೆ.

ಘಟನೆ ಬಳಿಕ ಆರೋಪಿ ಗೌರಿಯ ಪೋಷಕರಿಗೆ ಕರೆ ಮಾಡಿ ತನ್ನ ಕೃತ್ಯದ ಕುರಿತು ಮಾಹಿತಿ ನೀಡಿದ್ದು, ಬೆಚ್ಚಿಬಿದ್ದ ಪೋಷಕರು ಕೂಡಲೇ ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದರು. ಅವರ ಮಾಹಿತಿ ಮೇರೆಗೆ ಹುಳಿಮಾವು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಒಂದು ವರ್ಷದ ಹಿಂದೆ ಬೆಂಗಳೂರಿಗೆ ಬಂದಿದ್ದ ದಂಪತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ವರ್ಕ್ ಫ್ರಂ ಹೋಮ್ ಹಿನ್ನೆಲೆ ಮನೆಯಲ್ಲೇ ಕೆಲಸ ಮಾಡುತ್ತಿದ್ದ ಈ ದಂಪತಿ ನಡುವೆ ಏನಾದರೂ ವೈಮನಸ್ಸು ಉಂಟಾಗಿತ್ತೇ ಎಂಬುದು ತಿಳಿದು ಬಂದಿಲ್ಲ. ರಾಕೇಶ್ ಕೊಲೆ ಮಾಡಿದ ನಂತರ, ಅದೇ ಅಪಾರ್ಟ್‌ಮೆಂಟ್‌ನ ಮತ್ತೊಬ್ಬ ನಿವಾಸಿಗೆ ತನ್ನ ಪತ್ನಿ ಮೃತಪಟ್ಟಿದ್ದಾಳೆ ಎಂದು ಕರೆ ಮಾಡಿದ್ದಾನೆ. ಈ ವಿಷಯವನ್ನು ಮನೆಯ ಮಾಲೀಕರಿಗೆ ಮಾಹಿತಿ ನೀಡಿದ ನಂತರ ಪೊಲೀಸರಿಗೆ ದೂರು ದಾಖಲಾಗಿದೆ.

ತಕ್ಷಣ ಸ್ಥಳಕ್ಕೆ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.