
ಬೆಂಗಳೂರು: ಆಂಧ್ರಪ್ರದೇಶದ ಬಾಪಟ್ಟ ಜಿಲ್ಲೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರಾದ ಪ್ರಶಾಂತ್ ರೆಡ್ಡಿ (ಮಹದೇವಪುರದ ಬಿಜೆಪಿ ಯುವ ಮುಖಂಡ ಮತ್ತು ಉದ್ಯಮಿ) ಮತ್ತು ಅವರ ತಂದೆ, ಉದ್ಯಮಿ ವೀರಸ್ವಾಮಿ ರೆಡ್ಡಿ ಅವರನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ.
ಚೆಕ್ ಬೌನ್ಸ್ ಪ್ರಕರಣವೇ ಕೊಲೆಗೆ ಕಾರಣ?
ಪ್ರಶಾಂತ್ ರೆಡ್ಡಿ ಮತ್ತು ವೀರಸ್ವಾಮಿ ರೆಡ್ಡಿ ಅವರು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗಾಗಿ ಆಂಧ್ರಪ್ರದೇಶಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಇಬ್ಬರನ್ನೂ ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಪ್ರಶಾಂತ್ ಮತ್ತು ವೀರಸ್ವಾಮಿ ರೆಡ್ಡಿ ಅವರು ಬಿಲ್ಡರ್‌ಗಳಾದ ಮಾಧವ ರೆಡ್ಡಿ ಮತ್ತು ಅನಿಲ್ ರೆಡ್ಡಿ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಇದಕ್ಕೆ ಪ್ರತಿಯಾಗಿ, ಆಂಧ್ರಪ್ರದೇಶ ಮೂಲದ ಮಾಧವ ರೆಡ್ಡಿ ಮತ್ತು ಅನಿಲ್ ರೆಡ್ಡಿ ಕೂಡ ತಂದೆ-ಮಗನ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿದ್ದರು. ಘಟನೆ ನಡೆದ ದಿನ, ತಂದೆ-ಮಗ ಬೆಳಿಗ್ಗೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೋರ್ಟ್ ಸಮೀಪದಲ್ಲಿದ್ದರು ಎಂದು ವರದಿಯಾಗಿದೆ.