
ಬೆಳ್ತಂಗಡಿ: ‘ಬುರುಡೆ ಪ್ರಕರಣ’ದ ಪ್ರಮುಖ ಆರೋಪಿ ಚಿನ್ನಯ್ಯ ಮತ್ತು ಆತನ ಪತ್ನಿಯ ಖಾತೆಗೆ ಹಣ ವರ್ಗಾವಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಎಸ್‌ಐಟಿ (ವಿಶೇಷ ತನಿಖಾ ತಂಡ) ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಅವರ 11 ಮಂದಿ ಆಪ್ತರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಈ 11 ಮಂದಿ ಆಪ್ತರಲ್ಲಿ ಈಗಾಗಲೇ 6 ಜನರನ್ನು ಎಸ್‌ಐಟಿ ಅಧಿಕಾರಿಗಳು ಕರೆಸಿ ವಿಚಾರಣೆ ನಡೆಸಿದ್ದು, ಉಳಿದ ಐದು ಮಂದಿಯನ್ನು ಶೀಘ್ರದಲ್ಲೇ ವಿಚಾರಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಣ ಫಂಡಿಂಗ್ ಪ್ರಕರಣದ ತನಿಖೆಯನ್ನು ಎಸ್‌ಐಟಿ ಅಧಿಕಾರಿಗಳು ತೀವ್ರಗೊಳಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳವಣಿಗೆಯಾಗುವ ಸಾಧ್ಯತೆ ಇದೆ.