


ಬೈಲೂರು ಪರಶುರಾಮ ಥೀಮ್ ಪಾರ್ಕ್ ಹೆದ್ದಾರಿ ಬಳಿ ನಡೆದ ಘಟನೆಯಲ್ಲಿ ಚಾಲಕ ನಿದ್ರೆಗೆ ಜಾರಿದ್ದರಿಂದ ವಾಹನ ನಿಯಂತ್ರಣ ತಪ್ಪಿ ಕಲ್ಲಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಇಬ್ಬರಿಗೆ ತೀವ್ರ ಗಾಯಗಳಾಗಿದ್ದು, ಉಳಿದಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಘಟನೆ ಮದ್ಯಾಹ್ನ ಸುಮಾರು 2.30 ಕ್ಕೆ ನಡೆದಿದೆ.
ಪ್ರಾಥಮಿಕ ತನಿಖೆಯಿಂದ, ಚಾಲಕನು ನಿದ್ರೆಯಿಂದಾಗಿ ವಾಹನವನ್ನು ನಿಯಂತ್ರಿಸಲು ವಿಫಲನಾಗಿದ್ದಾನೆ ಎಂದು ತಿಳಿದು ಬಂದಿದೆ. ಅಪಘಾತದ ನಂತರ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.